ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಒಡಿಶಾದ ಎಸ್‌ಸಿಬಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಐಸಿಯುನಲ್ಲಿದ್ದ 10 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

Odisha Hospital Fire: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಟ ಹತ್ತು ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿಲಾಗಿದೆ.

ಸಂಗ್ರಹ ಚಿತ್ರ

ಭುವನೇಶ್ವರ್‌: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಟ ಹತ್ತು (Odisha Hospital Fire) ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಬೆಳಗಿನ ಜಾವ 2:30 ರಿಂದ 3 ಗಂಟೆಯ ಸುಮಾರಿಗೆ ಐಸಿಯುನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. . ಘಟನಾ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಎಸ್‌ಸಿಬಿ ಆಸ್ಪತ್ರೆ ಒಡಿಶಾದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಮುಖ ವೈದ್ಯಕೀಯ ಸೌಲಭ್ಯವಾಗಿದ್ದು, ಘಟನೆ ನಡೆದ ಸ್ವಲ್ಪ ಸಮಯದ ನಂತರ, ಒಡಿಶಾ ಮುಖ್ಯಮಂತ್ರಿ ಆರೋಗ್ಯ ಸಚಿವ ಮುಖೇಶ್ ಮೋಹನ್ ಚರಣ್ ಮಾಝಿ, ಮಹಾಲಿಂಗ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ರೋಗಿಗಳನ್ನು ಸಹ ಭೇಟಿ ಮಾಡಿದರು.



ಬಳಿಕ ಮಾತನಾಡಿ, ಒಟ್ಟು 23 ರೋಗಿಗಳನ್ನು ಇತರ ವಿಭಾಗಗಳಿಗೆ ಸ್ಥಳಾಂತರಿಸಲಾಗಿದೆ. ಇತರ ಐಸಿಯುಗಳು ಮತ್ತು ವಾರ್ಡ್‌ಗಳಿಗೆ ಸ್ಥಳಾಂತರಿಸುವಾಗ ಏಳು ಗಂಭೀರ ರೋಗಿಗಳು ಸಾವನ್ನಪ್ಪಿದರು, ಆದರೆ ಇನ್ನೂ ಮೂವರು ರೋಗಿಗಳು ನಂತರ ಸಾವನ್ನಪ್ಪಿದರು. ಗಾಯಗೊಂಡ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ" ಎಂದು ಮುಖ್ಯಮಂತ್ರಿ ಮಾಧ್ಯಮಗಳಿಗೆ ತಿಳಿಸಿದರು.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿಲಾಗಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಯನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

Vishakha Bhat Heggar

View all posts by this author