ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ನಾಳೆ ಹೊಸ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ
Nitish Kumar: 10 ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿದ್ದಾರೆ. ಅದಕ್ಕೂ ಮುನ್ನ ತಮ್ಮ ಸಚಿವ ಸಂಪುಟ ವಿಸರ್ಜನೆ ಮಾಡುವಂತೆ ಶಿಫಾರಸು ಮಾಡಿದ್ದಾರೆ ಎಂದು ರಾಜ್ಯ ಸಚಿವ ರಾಮ್ ಕೃಪಾಲ್ ಯಾದವ್ ಅವರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ಪಟನಾ: 10 ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ (Nitish Kumar) ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿದ್ದಾರೆ. ಅದಕ್ಕೂ ಮುನ್ನ ತಮ್ಮ ಸಚಿವ ಸಂಪುಟ ವಿಸರ್ಜನೆ ಮಾಡುವಂತೆ ಶಿಫಾರಸು ಮಾಡಿದ್ದಾರೆ ಎಂದು ರಾಜ್ಯ ಸಚಿವ ರಾಮ್ ಕೃಪಾಲ್ ಯಾದವ್ ಅವರು ತಿಳಿಸಿದ್ದಾರೆ. ಅವರ ಉತ್ತರಾಧಿಕಾರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಬಿಹಾರದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ, ಆದರೆ ಅವರ ಉತ್ತರಾಧಿಕಾರಿ ಯಾರು ಉನ್ನತ ಹುದ್ದೆಯಲ್ಲಿ ಇರುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
ನಿತೀಶ್ ಕುಮಾರ್ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. 243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿ, ಇಂದು ಸಂಜೆ ತನ್ನ ಕಚೇರಿಯಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ 'ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ನೇಮಿಸಿದೆ.
ರಾಜೀನಾಮೆ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ "ಇಂದಿನ ಸಂಪುಟ ಸಭೆಯ ನಂತರ, ನಾನು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿಯಾಗಿ ನನ್ನ ರಾಜೀನಾಮೆಯನ್ನು ಸಲ್ಲಿಸಿದೆ. ಈಗ ಹೊಸ ಸರ್ಕಾರ ಇಲ್ಲಿನ ಕೆಲಸವನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ. ಮುಂದೆಯೂ ಸಹ, ಬಹಳಷ್ಟು ಉತ್ತಮ ಕೆಲಸಗಳನ್ನು ಮಾಡಲಾಗುವುದು ಮತ್ತು ಬಿಹಾರವು ಹೆಚ್ಚಿನ ಪ್ರಗತಿ ಸಾಧಿಸಲಿದೆ" ಎಂದು ಹೇಳಿದ್ದಾರೆ.
ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; MLC ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ನಿತೀಶ್ ಕುಮಾರ್
ಮುಂದಿನ ಸಿಎಂ ಯಾರು?
ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಲ್ಲಿ ಪ್ರಮುಖರಾಗಿ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಇದ್ದು, ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಾಮ್ರಾಟ್ ಚೌಧರಿ ಅವರ ಹೆಸರು ಅಂತಿಮ ಎಂದು ಹೇಳಲಾಗುತ್ತಿದೆ.