ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗಣರಾಜ್ಯೋತ್ಸವಕ್ಕೂ ಮುನ್ನ ನಡೆದಿತ್ತಾ ಭಾರೀ ಸಂಚು? 10,000 ಕೆಜಿ ಸ್ಫೋಟಕಗಳು, ಡಿಟೋನೇಟರ್‌ಗಳು ವಶಕ್ಕೆ!

ಗಣರಾಜ್ಯೋತ್ಸವಕ್ಕೂ ಮುನ್ನ, ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ಜಮೀನೊಂದರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದೇ ಅಮೋನಿಯಂ ನೈಟ್ರೇಟ್ ಈ ಹಿಂದೆ 2025 ರ ನವೆಂಬರ್‌ನಲ್ಲಿ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಸೇರಿದಂತೆ ಪ್ರಮುಖ ಸ್ಫೋಟ ಪ್ರಕರಣಗಳಿಗೆ ಕಾರಣವಾಗಿತ್ತು.

ಸಂಗ್ರಹ ಚಿತ್ರ

ಜೈಪುರ: ಗಣರಾಜ್ಯೋತ್ಸವಕ್ಕೂ ಮುನ್ನ, ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ಜಮೀನೊಂದರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು (Explosives Seized) ವಶಪಡಿಸಿಕೊಂಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಶನಿವಾರ ತಡರಾತ್ರಿ ಹರ್ಸೌರ್ ಗ್ರಾಮದಲ್ಲಿ ದಾಳಿ ನಡೆಸಿದ್ದು, ಅಲ್ಲಿ 187 ಚೀಲಗಳಲ್ಲಿ ಪ್ಯಾಕ್ ಮಾಡಲಾದ 9,550 ಕೆಜಿ ಅಮೋನಿಯಂ ನೈಟ್ರೇಟ್ ಅನ್ನು ಜಮೀನೊಂದರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ನಾಗೌರ್ ಪೊಲೀಸ್ ವರಿಷ್ಠಾಧಿಕಾರಿ ಮೃದುಲ್ ಕಚವಾ ತಿಳಿಸಿದ್ದಾರೆ.

ಅಮೋನಿಯಂ ನೈಟ್ರೇಟ್ ಈ ಹಿಂದೆ 2025 ರ ನವೆಂಬರ್‌ನಲ್ಲಿ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಸೇರಿದಂತೆ ಪ್ರಮುಖ ಸ್ಫೋಟ ಪ್ರಕರಣಗಳಿಗೆ ಕಾರಣವಾಗಿತ್ತು. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಆತನ ವಿರುದ್ಧ ಈ ಹಿಂದೆ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ. ಅಮೋನಿಯಂ ನೈಟ್ರೇಟ್ ಜೊತೆಗೆ, ಪೊಲೀಸರು ಒಂಬತ್ತು ಪೆಟ್ಟಿಗೆ ಡಿಟೋನೇಟರ್‌ಗಳು, 12 ಪೆಟ್ಟಿಗೆಗಳು ಮತ್ತು 15 ಬಂಡಲ್ ನೀಲಿ ಫ್ಯೂಸ್ ವೈರ್, ಮತ್ತು 12 ಪೆಟ್ಟಿಗೆಗಳು ಮತ್ತು ಐದು ಬಂಡಲ್ ಕೆಂಪು ಫ್ಯೂಸ್ ವೈರ್ ಸೇರಿದಂತೆ ದೊಡ್ಡ ಪ್ರಮಾಣದ ಸ್ಫೋಟಕ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯು ಕಾನೂನುಬದ್ಧ ಮತ್ತು ಅಕ್ರಮ ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಸ್ಫೋಟಕಗಳನ್ನು ಪೂರೈಸುತ್ತಿದ್ದನೆಂದು ತಿಳಿದುಬಂದಿದೆ. ಸ್ಫೋಟಕ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

109 ಬಾಕ್ಸ್‌ ಸ್ಫೋಟಕಗಳಿದ್ದ ಟ್ರಕ್‌ ವಶಕ್ಕೆ; ದೆಹಲಿ ದಾಳಿಯಂತೆ ಸ್ಫೋಟ ನಡೆಸಲು ಇತ್ತಾ ಪ್ಲಾನ್‌?

ಕೆಲ ದಿನಗಳ ಹಿಂದೆ ಉತ್ತರಾಖಂಡದ (UttaraKhand) ಹಳ್ಳಿಯೊಂದರ ಶಾಲೆಯ ಬಳಿ ಹೆಚ್ಚಿನ ಪ್ರಮಾಣದ ಸ್ಫೋಟಕ ಜಿಲಾಟಿನ್ ಕಡ್ಡಿಗಳು (Explosives Found) ಪತ್ತೆಯಾಗಿದ್ದವು. ಪ್ರಾಂಶುಪಾಲ ಸುಭಾಷ್ ಸಿಂಗ್ ಮೊದಲು ಪೊದೆಗಳಲ್ಲಿ ಅನುಮಾನಾಸ್ಪದ ಪ್ಯಾಕೆಟ್‌ಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. . ಉಧಮ್ ಸಿಂಗ್ ನಗರ ಮತ್ತು ನೈನಿತಾಲ್ ಜಿಲ್ಲೆಗಳಿಂದ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳನ್ನು ಸಹ ಕರೆಸಲಾಯಿತು. ಶ್ವಾನ ಘಟಕವು ಕೂಲಂಕಷ ಶೋಧ ನಡೆಸಿದಾಗ, ಪೊದೆಗಳಲ್ಲಿ ಕೆಲವು ಜೆಲಾಟಿನ್ ಕಡ್ಡಿಗಳ ಪ್ಯಾಕೆಟ್‌ಗಳು ಕಂಡುಬಂದವು. ಇನ್ನೂ ಕೆಲವು ಪ್ಯಾಕೆಟ್‌ಗಳು ಸುಮಾರು 20 ಅಡಿ ದೂರದಲ್ಲಿ ಕಂಡು ಬಂದಿದ್ದವು.