ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ: 11 ಮಂದಿ ದುರ್ಮರಣ, 181 ಜನರ ಸ್ಥಿತಿ ಗಂಭೀರ

ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಅಕ್ರಮವಾಗಿ ತಯಾರಿಸಲಾದ ವಿಷಕಾರಿ ಮದ್ಯ (ಕಳ್ಳಭಟ್ಟಿ) ಸೇವಿಸಿದ ಪರಿಣಾಮ ಕಳೆದ ಎರಡು ದಿನಗಳಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ದುರಂತದಲ್ಲಿ ಅಸ್ವಸ್ಥಗೊಂಡಿರುವ ಸುಮಾರು 181 ಜನರನ್ನು ರಾಜಧಾನಿ ಇಂಫಾಲದ ಎರಡು ಪ್ರಮುಖ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ: 11 ಸಾವು, 181 ಜನರ ಸ್ಥಿತಿ ಗಂಭೀರ

ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ -

Vishakha Bhat Heggar
Vishakha Bhat Heggar Nov 20, 2026 8:56 PM

ಇಂಫಾಲ್:‌ ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಅಕ್ರಮವಾಗಿ ತಯಾರಿಸಲಾದ ವಿಷಕಾರಿ ಮದ್ಯ (ಕಳ್ಳಭಟ್ಟಿ) ಸೇವಿಸಿದ (Toxic Liquor) ಪರಿಣಾಮ ಕಳೆದ ಎರಡು ದಿನಗಳಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ದುರಂತದಲ್ಲಿ ಅಸ್ವಸ್ಥಗೊಂಡಿರುವ ಸುಮಾರು 181 ಜನರನ್ನು ರಾಜಧಾನಿ ಇಂಫಾಲದ ಎರಡು ಪ್ರಮುಖ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಚಂದೇಲ್ ಜಿಲ್ಲೆಯ ಚಕ್ಪಿಕರೋಂಗ್ ಉಪವಿಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯರು ನಕಲಿ ಮದ್ಯ ಸೇವಿಸಿದ ಬೆನ್ನಲ್ಲೇ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

ಮದ್ಯದಲ್ಲಿ 'ಮೆಥನಾಲ್' (Methanol) ಎಂಬ ವಿಷಕಾರಿ ರಾಸಾಯನಿಕ ಬೆರೆತಿರುವ ಶಂಕೆ ವ್ಯಕ್ತವಾಗಿದ್ದು, ಅಸ್ವಸ್ಥರಲ್ಲಿ ವಾಂತಿ, ಉಸಿರಾಟದ ತೊಂದರೆ ಹಾಗೂ ತೀವ್ರ ಅಸ್ವಸ್ಥತೆಯ ಲಕ್ಷಣಗಳು ಕಂಡುಬಂದಿವೆ. ಮುಖ್ಯಮಂತ್ರಿ ಯುಮ್ನಮ್ ಖೇಮಚಂದ್ ಸಿಂಗ್ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

ಘಟನೆ ಕುರಿತು ಮಾತನಾಡಿದ ಅವರು, 11 ಮಂದಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ, ಇಂಫಾಲದ ಶಿಜಾ ಮತ್ತು ಬಬಿನಾ ಸೇರಿದಂತೆ ಪ್ರಮುಖ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸುಮಾರು 181 ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದ್ದಾರೆ.

ಮತ್ತೆ ಮದ್ಯದ ಅಂಗಡಿ ಸಾಲಿನಲ್ಲಿ ಸರದಿಯಲ್ಲಿ ಮಹಿಳಾ ಮದ್ಯ ಪ್ರಿಯರು

ಚಂದೇಲ್ ಜಿಲ್ಲೆಯ ಚಕ್ಪಿಕರೋಂಗ್ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಈ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಂತ್ರಸ್ತರು ಸೇವಿಸಿದ್ದ ಮದ್ಯವನ್ನು ಕಾಕಚಿಂಗ್ ಜಿಲ್ಲೆಯ ಸುಗ್ನು ಎಂಬಲ್ಲಿಂದ ತರಲಾಗಿತ್ತು ಎಂದು ಚಂದೇಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬೆರಕೆ ಮದ್ಯ ತಯಾರಿಕೆ ಮತ್ತು ಮಾರಾಟ ಜಾಲದ ಪತ್ತೆಗೆ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.