Road Accident: ರಾಜಸ್ಥಾನದಲ್ಲಿ ಭೀಕರ ಅಪಘಾತ; ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು
ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಜೈಪುರ: ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು (Road Accident) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, "ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು ಅಪಘಾತಕ್ಕೀಡಾದ ಬಗ್ಗೆ ಮಾಹಿತಿ ಬಂದಿದ್ದು, ಇಲ್ಲಿಯವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು ಏಳರಿಂದ ಎಂಟು ಜನರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಹೇಳಿದರು. ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಭಕ್ತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಡೌಸಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜೀವಹಾನಿ ಸುದ್ದಿ ಅತ್ಯಂತ ದುಃಖಕರವಾಗಿದೆ . ಗಾಯಾಳುಗಳಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ . ದೇವರು ಅಗಲಿದ ಆತ್ಮಗಳಿಗೆ ತನ್ನ ದೈವಿಕ ಪಾದಗಳಲ್ಲಿ ಸ್ಥಾನ ನೀಡಲಿ ಮತ್ತು ಗಾಯಾಳುಗಳಿಗೆ ತ್ವರಿತ ಚೇತರಿಕೆ ನೀಡಲಿ ಎಂದು ಅವರು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು
ಪ್ರತ್ಯೇಕ ಘಟನೆಯಲ್ಲಿ ರಾಜಸ್ಥಾನದಲ್ಲಿ, ಸ್ಲೀಪರ್ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ಗೆ ಬೆಂಕಿಗಾಹುತಿಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಲೀಪರ್ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತದ ಪರಿಣಾಮ ಬಸ್ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ಹೊತ್ತಿಕೊಂಡಿತು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದ್ದು, ಅವರನ್ನು ರಕ್ಷಿಸಲಾಗಿದೆ. ಸಂಚೋರ್ ಉಪವಿಭಾಗದ ರಾಷ್ಟ್ರೀಯ ಹೆದ್ದಾರಿ-68 ರಲ್ಲಿ ಈ ಅಪಘಾತ ಸಂಭವಿಸಿದೆ.