ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cloudburst: ಕಿಶ್ತ್ವಾರ್‌ನಲ್ಲಿ ಭಾರಿ ಮೇಘಸ್ಫೋಟ; ಹಲವರು ನಾಪತ್ತೆ, ಮುಂದುವರಿದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟ ಸಂಭವಿಸಿದೆ. ಈ ವಿಕೋಪದಲ್ಲಿ ಕನಿಷ್ಟ 12 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಯುತ್ತಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಿಶ್ತ್ವಾರ್‌ನಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟ (Cloudburst) ಸಂಭವಿಸಿದೆ. ಈ ವಿಕೋಪದಲ್ಲಿ ಕನಿಷ್ಟ 12 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಯುತ್ತಿದೆ. ಮಚೈಲ್ ಮಾತಾ ದೇವಾಲಯದ ಬಳಿಯ ಚೋಸಿಟಿಯಲ್ಲಿ ಮೇಘಸ್ಫೋಟವಾಗಿದೆ. ಆಡಳಿತವು ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಕಿಶ್ತ್ವಾರ್‌ನಲ್ಲಿರುವ ಹಿಮಾಲಯದ ಮಾತಾ ಚಂಡಿ ದೇಗುಲದ ಬಳಿ ಇರುವ ಯಾತ್ರಾರ್ಥಿಗಳನ್ನು ಸ್ಥಳಾಂತರಿಸುತ್ತಿರುವ ದೃಶ್ಯಗಳು ಕಂಡುಬಂದಿವೆ.

ಚೋಸಿಟಿ ಪ್ರದೇಶದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದರೆ ಗಣನೀಯ ಸಾವುನೋವುಗಳು ಸಂಭವಿಸಬಹುದು. ಆಡಳಿತವು ತಕ್ಷಣವೇ ಕಾರ್ಯಪ್ರವೃತ್ತವಾಗಿದೆ ಮತ್ತು ರಕ್ಷಣಾ ತಂಡವು ಸ್ಥಳಕ್ಕೆ ತೆರಳಿದೆ. ಹಾನಿ ಮೌಲ್ಯಮಾಪನ ಮತ್ತು ಅಗತ್ಯ ರಕ್ಷಣಾ ಮತ್ತು ವೈದ್ಯಕೀಯ ನಿರ್ವಹಣಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಎಲ್‌ಒಪಿ ಮತ್ತು ಸ್ಥಳೀಯ ಶಾಸಕ ಸುನಿಲ್ ಕುಮಾರ್ ಶರ್ಮಾ ಹೇಳಿದ್ದಾರೆ. ಕಿಶ್ತ್ವಾರ್ ಉಪ ಆಯುಕ್ತ ಪಂಕಜ್ ಶರ್ಮಾ, ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಚಶೋತಿಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ ನಂತರ ಜುಲೈ 25 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 5 ರವರೆಗೆ ನಡೆಯಬೇಕಿದ್ದ ಮಚೈಲ್ ಮಾತಾ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.



ಕಳೆದ ವಾರ ಉತ್ತರಕಾಶಿಯ ಧರಾಲಿಭೂಕುಸಿತ ದುರಂತದಲ್ಲಿ ನೂರಾರು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಕಳೆದ 7 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದ್ದು, ಯಾವುದೇ ಕುರುಹುಗಳು ಸಿಕ್ಕಿಲ್ಲ. ಆಗಸ್ಟ್ 5 ರಂದು ಗ್ರಾಮಕ್ಕೆ ಅಪ್ಪಳಿಸಿದ ಮೇಘಸ್ಫೋಟ ಎಲ್ಲಿಂದ ಆರಂಭವಾಯಿತು ಎಂಬುದು ಪತ್ತೆಯಾಗಿದೆ. ಮೇಘಸ್ಫೋಟದ ಮೂಲವನ್ನು ಧರಾಲಿಯ ಮೇಲಿರುವ ಎತ್ತರದ ಹುಲ್ಲುಗಾವಲು 'ಝಂಡಾ ಬುಗ್ಯಾಲ್' ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Cloudburst: ಉತ್ತರಾಖಂಡದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ

ಗಡಿ ರಸ್ತೆಗಳ ಸಂಸ್ಥೆ (BRO), SDRF ಮತ್ತು ಲೋಕೋಪಯೋಗಿ ಇಲಾಖೆ (PWD) ತಂಡಗಳು ಗಂಗಾನಿಯಲ್ಲಿ ಹಾನಿಗೊಳಗಾದ ಸೇತುವೆಯ ದುರಸ್ತಿ ಕಾರ್ಯ ಆರಂಭಿಸಿವೆ. ವಿಪತ್ತು ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧರಾಲಿಯಲ್ಲಿ ಮೊಕ್ಕಾಂ ಹೂಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ.