ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮದುವೆಗೆಂದು ತೆರಳಿದವರು ತಲುಪಿದ್ದು ಮಸಣಕ್ಕೆ: ಕಂಟೇನರ್-ಟ್ರಕ್ ನಡುವೆ ಡಿಕ್ಕಿ, 12 ಮಂದಿ ಬಲಿ

12 Killed in Accident: ಮದುವೆಯ ಅತಿಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸಂಭವಿಸಿದೆ. ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ, ಕಂಟೇನರ್-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮದುವೆಗೆ ಹೋಗುತ್ತಿದ್ದ ಟ್ರಕ್ ನಜ್ಜುಗುಜ್ಜಾಯಿತು.

ಕಂಟೇನರ್-ಟ್ರಕ್ ನಡುವೆ ಭೀಕರ ಅಪಘಾತ, 12 ಮಂದಿ ಬಲಿ

ಸಾಂದರ್ಭಿಕ ಚಿತ್ರ -

Priyanka P
Priyanka P May 18, 2026 8:03 PM

ಮುಂಬೈ, ಮೇ 18: ಮದುವೆಯ ಅತಿಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸಂಭವಿಸಿದೆ. ಸೋಮವಾರ (ಮೇ 18) ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. 40ಕ್ಕೂ ಹೆಚ್ಚು ಅತಿಥಿಗಳು ಸಣ್ಣ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು (Road accident).

ಬೆಳಗಿನ ಜಾವ 4 ಗಂಟೆ ಸುಮಾರಿಗೆ, ಕಂಟೇನರ್-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮದುವೆಗೆ ಹೋಗುತ್ತಿದ್ದ ಟ್ರಕ್ ನಜ್ಜುಗುಜ್ಜಾಗಿದೆ. ಎರಡೂ ವಾಹನಗಳು ಪಲ್ಟಿಯಾಗಿದ್ದರಿಂದ ಅನೇಕ ಪ್ರಯಾಣಿಕರು ಅವಶೇಷಗಳೊಳಗೆ ಸಿಲುಕಿಕೊಂಡರು. ಘಟನೆಯ ನಂತರ, ಸ್ಥಳೀಯ ನಿವಾಸಿಗಳು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸುಮಾರು 25 ಜನರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಾಸಾ ಉಪ-ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಿಂದಾಗಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸಂಚಾರ ಸ್ವಲ್ಪ ಸಮಯದವರೆಗೆ ಅಸ್ತವ್ಯಸ್ತವಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ಆರಂಭಿಸಿದ್ದು, ಅಪಘಾತದ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಕೊಲ್ಲೂರು ಬಳಿ ಮೀನು ಸಾಗಣೆ ವಾಹನ-ಜೀಪ್ ಡಿಕ್ಕಿ; ಕೇರಳ ಮೂಲದ ಇಬ್ಬರು ಪ್ರವಾಸಿಗರ ಸಾವು

ಅಜಮ್‌ಗಢದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ

ಲಖನೌ: ಉತ್ತರ ಪ್ರದೇಶದ ಕಂಧಾರಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 238 ಮೈಲಿ ಕಲ್ಲಿನ ಬಳಿ ಶನಿವಾರ (ಮೇ 16) ಹೃದಯ ವಿದ್ರಾವಕ ಅಪಘಾತ ಸಂಭವಿಸಿದೆ. ಕಾರು ಟ್ರಕ್‌ಗೆ ಸಿಲುಕಿಕೊಂಡು ಸುಮಾರು ಒಂದು ಕಿಲೋ ಮೀಟರ್ ದೂರ ಎಳೆದೊಯ್ಯಲ್ಪಟ್ಟಿತು. ಈ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಸೇರಿ ಒಟ್ಟು ಐವರು ಮೃತಪಟ್ಟರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಕಂಧಾರಾಪುರ ಪೊಲೀಸ್ ಠಾಣೆಯ ಪೊಲೀಸರು, ಸಂಚಾರ ಎಸ್‌ಪಿ ಪಂಕಜ್ ಶ್ರೀವಾಸ್ತವ, ನಗರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಂ ತೋಡಿ ಮತ್ತು ಇತರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಮೃತರನ್ನು ಗುರುತಿಸಿದ ನಂತರ, ಅವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಬಿಹಾರದ ಸಿವಾನ್ ಜಿಲ್ಲೆಯ ಸಿಸ್ವಾನ್‌ನಲ್ಲಿ ವಾಸಿಸುವ ಕುಟುಂಬ ಸದಸ್ಯರು ಅಜಮ್‌ಗಢಕ್ಕೆ ತೆರಳಿದ್ದಾರೆ.

ಬಿಹಾರದ ಸಿವಾನ್ ಜಿಲ್ಲೆಯ ಸಿಸ್ವಾನ್ ನಿವಾಸಿ ಮನೀಶ್ ಶ್ರೀವಾಸ್ತವ (38) ತಮ್ಮ ಕಾರಿನಲ್ಲಿ ಪತ್ನಿ ಕಾಂಚನ್ ಶ್ರೀವಾಸ್ತವ (35), ಹೆಣ್ಣುಮಕ್ಕಳಾದ ಅದಿತಿ (16), ಆಸ್ತಾ (14) ಮತ್ತು 15 ವರ್ಷದ ಮಗನೊಂದಿಗೆ ಮನೆಯಿಂದ ಹೊರಟಿದ್ದರು. ಅಜಮ್‌ಗಢ ಜಿಲ್ಲೆಯ ಕಂಧಾರಾಪುರ ಪೊಲೀಸ್ ಠಾಣೆ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 239ನೇ ಮೈಲಿಗಲ್ಲನ್ನು ತಲುಪಿದ್ದಾಗ ಇದ್ದಕ್ಕಿದ್ದಂತೆ ನಿದ್ದೆಗೆ ಜಾರಿದ ಪರಿಣಾಮ ಕಾರು ಹಾದುಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದವರೆಲ್ಲರೂ ದುರ್ಮರಣಕ್ಕೀಡಾಗಿದ್ದಾರೆ.