Naxalites Encounter: ಛತ್ತೀಸ್‌ಗಢದಲ್ಲಿ ಎನ್ಕೌಂಟರ್; 12 ನಕ್ಸಲರ ಹೆಡೆಮುರಿ ಕಟ್ಟಿದ ಭದ್ರತಾ ಪಡೆ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಬಲಿಯಾಗಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್‌ಗಳು ನಡೆಯುತ್ತಿವೆ.
ರಾಯ್‌ಪುರ್: ಛತ್ತೀಸ್‌ಗಢದಲ್ಲಿ ಇಂದು(ಜ.16) ಮತ್ತೊಂದು ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಬರೋಬ್ಬರಿ 12 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ(Naxalites Encounter)
ಇಂದು ಮುಂಜಾನೆ 9 ಗಂಟೆ ಸರಿ ಸುಮಾರಿಗೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಗುಂಡಿನ ದಾಳಿಗೆ ಬಲಿಯಾಗಿ ಹನ್ನೆರಡು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
12 Naxalites killed in encounter with security forces in Chhattisgarh's Bijapur district: Police. pic.twitter.com/6pRjcBJcqW
— Press Trust of India (@PTI_News) January 16, 2025
ಭದ್ರತಾ ಸಿಬ್ಬಂದಿ ತಂಡವು ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಕಾರ್ಯಾಚರಣೆಯಲ್ಲಿ ಮೂರು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (DRG), CRPF, ಅರಣ್ಯ ಯುದ್ಧ ಘಟಕದ ಐದು ಬೆಟಾಲಿಯನ್‌ಗಳು, COBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) 229 ನೇ ಬೆಟಾಲಿಯನ್ ಸಿಬ್ಬಂದಿ ಭಾಗವಹಿಸಿದ್ದರು ಎನ್ನಲಾಗಿದೆ.
ನಕ್ಸಲರ ಸುಳಿವು ಸಿಗುತ್ತಿದ್ದಂತೆ ಭದ್ರತಾ ಪಡೆಗಳು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ 12 ಮಂದಿ ನಕ್ಸಲರು ಮೃತಪಟ್ಟಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಿದೆ.
ಈ ಸುದ್ದಿಯನ್ನೂ ಓದಿ:Crime News: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಪತಿ; ವೈರಲ್ ವಿಡಿಯೊ ಇಲ್ಲಿದೆ
ಈ ತಿಂಗಳಲ್ಲೇ ಬಿಜಾಪುರದಲ್ಲಿ ಎರಡು ಎನ್‌ಕೌಂಟರ್‌ಗಳು ನಡೆದಿವೆ. ಈ ಹಿಂದೆ ಜನವರಿ 12 ರಂದು, ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಇದೇ ರೀತಿಯ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐದು ನಕ್ಸಲರು ಎನ್ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು.