ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Naxals Encounter: 12 ನಕ್ಸಲರನ್ನು ಗುಂಡಿಕ್ಕಿ ಕೊಂದ ಭದ್ರತಾ ಪಡೆಗಳು, ಮೂವರು ಯೋಧರು ಹುತಾತ್ಮ

ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಮತ್ತು CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – CRPFನ ಗಣ್ಯ ಘಟಕ) ಒಳಗೊಂಡ ಜಂಟಿ ತಂಡ ಎನ್​ಕೌಂಟರ್ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಎನ್‌ಕೌಂಟರ್ ನಡೆದ ಸ್ಥಳದಿಂದ ಇಲ್ಲಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

ನಕ್ಸಲೀಯರ ಹತ್ಯೆ

ಬಿಜಾಪುರ, ಡಿ.03: ಗುರುವಾರ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು (Naxals Encounter) ಸಾವನ್ನಪ್ಪಿದ್ದಾರೆ. ದುರದೃಷ್ಟವಶಾತ್, ಜಿಲ್ಲಾ ಮೀಸಲು ಪಡೆ (DRG)ಯ ಮೂವರು ಸೈನಿಕರು ಕೂಡ ಹುತಾತ್ಮರಾಗಿದ್ದಾರೆ. ಇತರ ಇಬ್ಬರು DRG ಜವಾನರು ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಗಾಯಗೊಂಡಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯ ಬಳಿಯ ಅರಣ್ಯ ಗಂಗಲೂರು ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ಇನ್ನೂ ನಡೆಯುತ್ತಿರುವುದರಿಂದ ಮೃತರಾದ ನಕ್ಸಲರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಮತ್ತು CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – CRPFನ ಗಣ್ಯ ಘಟಕ) ಒಳಗೊಂಡ ಜಂಟಿ ತಂಡ ಎನ್​ಕೌಂಟರ್ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಎನ್‌ಕೌಂಟರ್ ನಡೆದ ಸ್ಥಳದಿಂದ ಇಲ್ಲಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಸ್ಥಳದಿಂದ ಸಿಂಗಲ್ ಲೋಡಿಂಗ್ ರೈಫಲ್ಸ್ (ಎಸ್‌ಎಲ್‌ಆರ್), ಇನ್ಸಾಸ್ ರೈಫಲ್ಸ್ .303 ರೈಫಲ್ಸ್, ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

M‌ohan Vishwa Column: ನಟೋರಿಯಸ್‌ ನಕ್ಸಲ್‌ ಮಾದ್ವಿ ಹಿದ್ಮಾ ಫಿನಿಷ್

ಗಾಯಗೊಂಡ ಯೋಧರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಯಿತು, ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಒಟ್ಟು 268 ನಕ್ಸಲರು ಸಾವನ್ನಪ್ಪಿದ್ದಾರೆ. ಅವರಲ್ಲಿ, ಬಿಜಾಪುರ ಮತ್ತು ದಂತೇವಾಡ ಸೇರಿದಂತೆ 7 ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 239 ಜನರನ್ನು ಹತ್ಯೆ ಮಾಡಲಾಯಿತು. ರಾಯ್ಪುರ ವಿಭಾಗದ ವ್ಯಾಪ್ತಿಗೆ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ 27 ಜನರನ್ನು ಗುಂಡಿಕ್ಕಿ ಕೊಲ್ಲಲಾಯಿತು. ದುರ್ಗ್ ವಿಭಾಗದ ಮೊಹ್ಲಾ-ಮನ್ಪುರ್-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಇಬ್ಬರು ನಕ್ಸಲರು ಕೊಲ್ಲಲ್ಪಟ್ಟರು.

ಹರೀಶ್‌ ಕೇರ

View all posts by this author