ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

125 ದಿನಗಳ ಖಾತರಿ ಉದ್ಯೋಗ: ವಿಬಿ ಜಿ ರಾಮ್ ಜಿ ಕಾಯ್ದೆ ಇಂದಿನಿಂದ ಜಾರಿ

ಗ್ರಾಮೀಣ ಕುಟುಂಬಗಳಿಗೆ 125 ದಿನಗಳವರೆಗಿನ ಉದ್ಯೋಗ ಖಾತರಿ ನೀಡುವ ವಿಬಿ ಜಿ ರಾಮ್ ಜಿ ಕಾಯ್ದೆ ಬುಧವಾರದಿಂದ ಜಾರಿಗೆ ಬರಲಿದೆ. ಇದು ಪ್ರಸ್ತುತ ಅಸ್ತಿತ್ವದಲ್ಲಿರುವ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ದಿನಗಳ ಮಿತಿಯನ್ನು ಹೆಚ್ಚಿಸುವ ಶಾಸನ ಬದ್ದ ಹಕ್ಕನ್ನು ಒದಗಿಸುತ್ತದೆ. ಇದರ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.

ಸಂಗ್ರಹ ಚಿತ್ರ

ನವದೆಹಲಿ: ಗ್ರಾಮೀಣ ಕುಟುಂಬಗಳಿಗೆ 125 ದಿನಗಳವರೆಗಿನ ಉದ್ಯೋಗ ಖಾತರಿಯ ಭರವಸೆ ನೀಡುವ ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ (VB G RAM G Act) 2025 ಬುಧವಾರದಿಂದ ಜಾರಿಗೆ ಬರಲಿದೆ. ಇದರ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಕಾಯ್ದೆಯು ಪ್ರಸ್ತುತ ಅಸ್ತಿತ್ವದಲ್ಲಿರುವ ಉದ್ಯೋಗ ಖಾತರಿ (MGNREGA) ಯೋಜನೆಯ ಉದ್ಯೋಗ ದಿನಗಳ ಮಿತಿಯನ್ನು ಹೆಚ್ಚಿಸುವ ಶಾಸನ ಬದ್ದ ಹಕ್ಕನ್ನು ಒದಗಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ.

ಸುಗಮ ಪರಿವರ್ತನೆ, ಸಕಾಲಿಕ ವೇತನ ಪಾವತಿಗಳನ್ನು ಖಚಿತಪಡಿಸಿಕೊಳ್ಳಲು ಹೊಸ ಚೌಕಟ್ಟಿನ ಅಡಿಯಲ್ಲಿ ರೂಪಿಸಲಾಗಿರುವ ವಿಬಿ ಜಿ ರಾಮ್ ಜಿ ಕಾಯ್ದೆಯು ಉದ್ಯೋಗ ಖಾತರಿ ಕೆಲಸಗಳನ್ನು ಯಾವುದೇ ಅಡೆತಡೆಯಿಲ್ಲದೆ ನಿರ್ವಹಿಸುವಂತೆ ನೋಡಿಕೊಳ್ಳುತ್ತದೆ. ಇದಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ಕೇಂದ್ರ ಸರ್ಕಾರವು 95,692.31 ಕೋಟಿ ರೂ. ಗಳನ್ನು ಹಂಚಿಕೆ ಮಾಡಿದೆ.

ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅರ್ಹ ಗ್ರಾಮೀಣ ಕಾರ್ಮಿಕ ಒಂದು ದಿನವೂ ಕೆಲಸವಿಲ್ಲದೆ ಉಳಿಯದಂತೆ ಖಚಿತಪಡಿಸಿಕೊಳ್ಳುವುದು ಕೇಂದ್ರದ ಗುರಿಯಾಗಿದೆ. ಇದಕ್ಕಾಗಿ ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆಯನ್ನು ಜಾರಿಗೆ ತರಲು ಆಡಳಿತಾತ್ಮಕ, ಹಣಕಾಸು ಮತ್ತು ತಾಂತ್ರಿಕ ಸಿದ್ಧತೆಗಳನ್ನು ಪೂರ್ಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿವೆ ಎಂದು ತಿಳಿಸಿದರು.

ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆಯ ಬಾಕಿ ಜಾರಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಮಂಗಳವಾರ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪರಿಷ್ಕೃತ ವೇತನ ದರಗಳನ್ನು ಪ್ರಕಟಿಸಿದೆ. ಇದರಲ್ಲಿ ಹಿಂದಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ಸರಾಸರಿ ವೇತನವು ದಿನಕ್ಕೆ 298.8 ರೂ. ಗಳಾಗಿತ್ತು. ಇದನ್ನು ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ದಿನಕ್ಕೆ 327.4 ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ದಿನಕ್ಕೆ ಸರಾಸರಿ 28.6 ರೂ. ಹೆಚ್ಚಳ ಮಾಡಿದಂತಾಗಿದೆ. ಹೊಸ ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್‌ಗಳನ್ನು ನೀಡುವವರೆಗೆ ಅಸ್ತಿತ್ವದಲ್ಲಿರುವ ಇ-ಕೆವೈಸಿ ಪರಿಶೀಲಿಸಿದ ಜಾಬ್ ಕಾರ್ಡ್‌ಗಳು ಮಾನ್ಯವಾಗಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಖಾತರಿ ಯೋಜನೆಯಡಿಯಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಜಲ ಸಂರಕ್ಷಣೆ, ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು, ಗ್ರಾಮೀಣ ಮೂಲಸೌಕರ್ಯ ಮತ್ತು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಯೋಜನೆಗಳನ್ನು ಗ್ರಾಮ ಪಂಚಾಯತ್‌ಗಳು ಅನುಷ್ಠಾನಗೊಳಿಸಲಿದೆ. ಇದಕ್ಕಾಗಿ ಬಜೆಟ್ ನಿಬಂಧನೆಗಳನ್ನು ಕೂಡ ಮಾಡಲಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಂಡಾಯ: ‘ʼನಾವು ಪಾಕಿಸ್ತಾನದ ಭಾಗವಲ್ಲʼ’ ಎಂದ ಸ್ಥಳೀಯರು

ನಾಳೆ ತಿರುಪತಿಯಲ್ಲಿ ಉದ್ಘಾಟನೆ

ವಿಬಿ ಜಿ ರಾಮ್ ಜಿ ಕಾಯ್ದೆಯ ರಾಷ್ಟ್ರೀಯ ಉದ್ಘಾಟನೆಯು ಜುಲೈ 2 ರಂದು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್‌ ಹಾಗೂ ಮಿಷನ್‌ಗೆ ಸಂಬಂಧಿಸಿದ ಜಾಗೃತಿ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author