ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು 16 ಮಂದಿ ಸಾವು
ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಕನಿಷ್ಠ 16 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಝಿರಂಗದಲ್ಲಿ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದು ಈ ಅನಾಹುತ ಸಂಭವಿಸಿದೆ.
ಅಸ್ಸಾಂನಲ್ಲಿ ನಡೆದ ರಸ್ತೆ ಅಪಘಾತ -
Ramesh Ballamoole
Nov 13, 2026 4:50 PM
ದಿಸ್‌ಪುರ, ನ. 13: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಕನಿಷ್ಠ 16 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಝಿರಂಗದಲ್ಲಿ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದು ಈ ಅನಾಹುತ ಸಂಭವಿಸಿದೆ (Kaziranga Road Accident). ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ʼʼಕಾಝಿರಂಗದ ರೋಂಗಜಾನ್‌ನಲ್ಲಿ ನವೆಂಬರ್ 13ರ ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗಾಯಗೊಂಡ 7 ಮಂದಿಯನ್ನು ಜೋರ್ಹಾತ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ವೇಗವಾಗಿ ಸಾಗುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಬಸ್‌ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ಸ್ಥಳದಲ್ಲಿ ರಕ್ಷಣಾ ಕಾರ್ಚಾರಣೆ ನಡೆಯುತ್ತಿದೆ.