ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಟ್ರಾವೆಲ್ಲರ್‌-ಟ್ರಕ್‌ ಡಿಕ್ಕಿಯಾಗಿ 16 ಮಂದಿ ಸಾವು

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಕನಿಷ್ಠ 16 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಝಿರಂಗದಲ್ಲಿ ಟ್ರಾವೆಲ್ಲರ್‌ ಮತ್ತು ಟ್ರಕ್‌ ಪರಸ್ಪರ ಡಿಕ್ಕಿ ಹೊಡೆದು ಈ ಅನಾಹುತ ಸಂಭವಿಸಿದೆ.

ಅಸ್ಸಾಂನಲ್ಲಿ ನಡೆದ ರಸ್ತೆ ಅಪಘಾತ

ದಿಸ್‌ಪುರ, ನ. 13: ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ. ಕಾಝಿರಂಗದಲ್ಲಿ ಟ್ರಾವೆಲ್ಲರ್‌ ಮತ್ತು ಟ್ರಕ್‌ ಪರಸ್ಪರ ಡಿಕ್ಕಿ ಹೊಡೆದು ಈ ಅನಾಹುತ ಸಂಭವಿಸಿದೆ (Kaziranga Road Accident). ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ʼʼಕಾಝಿರಂಗದ ರೋಂಗಜಾನ್‌ನಲ್ಲಿ ನವೆಂಬರ್‌ 13ರ ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗಾಯಗೊಂಡ 7 ಮಂದಿಯನ್ನು ಜೋರ್ಹಾತ್‌ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇಗವಾಗಿ ಸಾಗುತ್ತಿದ್ದ ಟ್ರಾವೆಲ್ಲರ್‌ ಟ್ರಕ್‌ಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಟ್ರಾವೆಲ್ಲರ್‌ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Ramesh Ballamoole

View all posts by this author