ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Naxal Encounter: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ; 16 ನಕ್ಸಲರ ಎನ್‌ಕೌಂಟರ್‌, ಇಬ್ಬರು ಅಧಿಕಾರಿಗಳಿಗೆ ಗಾಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೆರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ; 16 ನಕ್ಸಲರ ಎನ್‌ಕೌಂಟರ್‌

Profile Vishakha Bhat Mar 29, 2025 10:53 AM

ರಾಯ್ಪುರ್:‌ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ (Naxal Encounter) ಕನಿಷ್ಠ 16 ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೆರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಬೆಳಗಿನ ಜಾವ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲೀಯ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಶುಕ್ರವಾರ ರಾತ್ರಿ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದರು. ನ್‌ಕೌಂಟರ್ ನಡೆದ ಸ್ಥಳದಿಂದ ಇದುವರೆಗೆ ಹದಿನಾರು ನಕ್ಸಲರ ಶವಗಳನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಲೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು.

ಮಾರ್ಚ್‌ 25 ರಂದು ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು (Naxal Encounter) ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಬಸ್ತಾರ್ ಪೊಲೀಸರು ತಿಳಿಸಿದ್ದಾರೆ. ಹತನಾದ ನಕ್ಸಲರಲ್ಲಿ 25 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಕಮಾಂಡರ್‌ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ದಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ತಂಡ ನಕ್ಸಲೀಯ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Naxal Attack: ಛತ್ತೀಸ್‌ಗಢದ ಬಿಜಾಪುರಲ್ಲಿ ಐಇಡಿ ಸ್ಫೋಟ; ಇಬ್ಬರು ಎಸ್‌ಟಿಎಫ್ ಸಿಬ್ಬಂದಿಗೆ ಗಾಯ

ಮಾರ್ಚ್‌ 24 ರಂದು ಛತ್ತೀಸ್‌ಗಢದ ಬಿಜಾಪುರದಲ್ಲಿ ತಲೆಗೆ 13 ಲಕ್ಷ ರೂ. ಇನಾಮು ಹೊಂದಿದ್ದ 6 ಮಂದಿ ಸೇರಿದಂತೆ 22 ನಕ್ಸಲೀಯರು ಭಾನುವಾರ ಶರಣಾಗಿದ್ದರು. ಈ ವರ್ಷ ಇಲ್ಲಿಯವರೆಗೆ 107 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, 82 ಮಂದಿಯನ್ನು ಹೊಡೆದುರುಳಿಸಲಾಗಿದೆ. 143 ನಕ್ಸಲೀಯರನ್ನು ಬಿಜಾಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.