ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ಚಾರ್​ಮಿನಾರ್​ ಬಳಿ ಭೀಕರ ಅಗ್ನಿ ಅವಘಡ ; ಮೃತರ ಸಂಖ್ಯೆ 17ಕ್ಕೆ ಏರಿಕೆ

ತೆಲಂಗಾಣದ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 17 ಮಂದಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಚಾರ್​ಮಿನಾರ್​ ಬಳಿ ಭೀಕರ ಅಗ್ನಿ ಅವಘಡ

Profile Vishakha Bhat May 18, 2025 11:40 AM

ಹೈದರಾಬಾದ್: ತೆಲಂಗಾಣದ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 17 ಮಂದಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಕಿಗೆ (Fire accident) ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಕೆಲವು ಆಭರಣ ಅಂಗಡಿಗಳನ್ನು ಹೊಂದಿರುವ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ನಂತರ ಶೀಘ್ರದಲ್ಲೇ ಮೂರು ಅಂತಸ್ತಿನ ಕಟ್ಟಡದ ಮೇಲಿನ ಮಹಡಿಗಳಿಗೆ ಬೆಂಕಿ ಹರಡಿದೆ. ಕೆಲವು ಕುಟುಂಬಗಳು ಮೇಲಿನ ಮಹಡಿಯ ಕೋಣೆಯಲ್ಲಿ ವಾಸಿಸುತ್ತಿದ್ದವು.

ಮಾಹಿತಿಯ ಮೇರೆಗೆ ಮೊಘಲ್‌ಪುರ ಮತ್ತು ಗೌಳಿಗುಡ ಅಗ್ನಿಶಾಮಕ ಠಾಣೆಗಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಘಟನೆಯಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್‌ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮಾತನಾಡಿ, "ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Viral News: ಸ್ಟಂಟ್ ಮಾಡಲು ಹೋಗಿ ಪ್ಯಾಂಟ್‍ಗೆ ಬೆಂಕಿ ಹಚ್ಚಿಕೊಂಡ ಭೂಪ; ಈ ವಿಡಿಯೊ ನೋಡಿ

ಮೇ 14 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್‌ನ ಬೇಗಂ ಬಜಾರ್‌ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಿಸಿದ್ದರು.