ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಕನ್ವಾರಿ ಯಾತ್ರಿಗಳಿದ್ದ ಬಸ್‌ಗೆ ಟ್ರಕ್‌ ಡಿಕ್ಕಿ ; ಸ್ಥಳದಲ್ಲಿಯೇ 18 ಭಕ್ತರು ಸಾವು, ಹಲವರಿಗೆ ಗಾಯ

ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಯೋಘರ್‌ನ ಮೋಹನಪುರದ ಜಮುನಿಯಾ ಅರಣ್ಯದ ಬಳಿ ಈ ಘಟನೆ ನಡೆದಿದೆ.

ಕನ್ವಾರಿ ಯಾತ್ರಿಗಳಿದ್ದ ಬಸ್‌ಗೆ ಟ್ರಕ್‌ ಡಿಕ್ಕಿ ; 18 ಭಕ್ತರು ಸಾವು

Vishakha Bhat Vishakha Bhat Jul 29, 2025 10:41 AM

ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಡುಗೆ ಅನಿಲ (Road Accident) ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಕನ್ವಾರಿಯಾಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಬೆಳಗಿನ ಜಾವ 4:30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಬಿಜೆಪಿ ಸಂಸದ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ, ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್‌ನಲ್ಲಿ, ಶ್ರಾವಣ ಮಾಸದ ಕನ್ವರ್ ಯಾತ್ರೆಯ ಸಮಯದಲ್ಲಿ, ಬಸ್ ಮತ್ತು ಟ್ರಕ್ ಅಪಘಾತದಲ್ಲಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ಅವರು ಹೇಳಿದರು.

"ದಿಯೋಘರ್‌ನ ಮೋಹನಪುರದ ಜಮುನಿಯಾ ಅರಣ್ಯದ ಬಳಿ, ಕನ್ವಾರಿಯಾ ಕುಟುಂಬವನ್ನು ಹೊತ್ತೊಯ್ಯುತ್ತಿದ್ದ 32 ಆಸನಗಳ ಬಸ್, ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ (ಡಮ್ಕಾ ವಲಯ) ಶೈಲೇಂದ್ರ ಕುಮಾರ್ ಸಿನ್ಹಾ ತಿಳಿಸಿದರು.

ಈ ಸುದ್ದಿಯನ್ನೂ ಓದಿ: Madikeri accident: ಮಡಿಕೇರಿಯಲ್ಲಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಪ್ರತ್ಯೇಕ ಘಟನೆಯಲ್ಲಿ, ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸುಮಾರು 20 ವಾಹನಗಳು ಅಪಘಾತಕ್ಕೀಡಾಗಿವೆ (Accident). 20ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ, ಓರ್ವ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖೋಪೋಲಿ ಪೊಲೀಸ್ ಠಾಣೆ (Khopoli Police Station) ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಬರುವಾಗ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಟ್ರಕ್‌ ಮುಂದೆ ಸಾಗುತ್ತಿದ್ದ BMW ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.