ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸುವ ಪ್ರಸ್ತಾವನೆ ಮಂಡಿಸಲು ಸಹಿ ಹಾಕಿದ 180 ಸಂಸದರು

Election Commission controversy: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಂಸತ್ತಿನಲ್ಲಿ ನೋಟಿಸ್ ಮಂಡಿಸಲು ವಿರೋಧ ಪಕ್ಷಗಳು ಸಹಿ ಸಂಗ್ರಹಿಸಿವೆ. ಪ್ರಸ್ತಾವನೆ ಒಂದು ಅಥವಾ ಎರಡು ದಿನಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಂಡನೆಯಾಗುವ ಸಾಧ್ಯತೆ ಇದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (ಸಂಗ್ರಹ ಚಿತ್ರ)

ನವದೆಹಲಿ, ಮಾ.12: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ವಿಪಕ್ಷಗಳ ಅಸಮಾಧಾನ ಮುಂದುವರಿದಿದೆ. ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಂಸತ್ತಿನಲ್ಲಿ ನೊಟೀಸ್‌ ಮಂಡಿಸಲು ವಿರೋಧ ಪಕ್ಷಗಳು (Opposition Party) ಸಹಿ ಸಂಗ್ರಹಿಸಿವೆ. ಇದರಲ್ಲಿ ಪಕ್ಷಪಾತ ಮತ್ತು ತಾರತಮ್ಯದ ನಡವಳಿಕೆ ಸೇರಿದಂತೆ ಹಲವು ಆರೋಪಗಳನ್ನು ಮಾಡಲಾಗಿದೆ.

ಪ್ರಸ್ತಾವನೆಯನ್ನು ಒಂದು ಅಥವಾ ಎರಡು ದಿನಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಲ್ಲಿಸುವ ಸಾಧ್ಯತೆಯಿದೆ. ಸಹಿ ಸಂಗ್ರಹಿಸುವ ಪ್ರಕ್ರಿಯೆಯು ಪೂರ್ಣಗೊಂಡಿದೆ ಎಂದು ಹಿರಿಯ ಸಂಸದರೊಬ್ಬರು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಸಲ್ಲಿಸಲು ಮಂಡಿಸಲು ಉದ್ದೇಶಿಸಲಾದ ಪ್ರಸ್ತಾವನೆಗೆ ಇದುವರೆಗೆ ಸುಮಾರು 120 ಸಂಸದರು ಸಹಿ ಹಾಕಿದ್ದಾರೆ. ಸುಮಾರು 60 ಸಂಸದರು ರಾಜ್ಯಸಭೆಯಲ್ಲಿ ಸಲ್ಲಿಸಬೇಕಾದ ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಯಮಗಳ ಪ್ರಕಾರ, ಲೋಕಸಭೆಯಲ್ಲಿ ಸಿಇಸಿಯನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸುವ ನೋಟಿಸ್‌ಗೆ ಕನಿಷ್ಠ 100 ಸಂಸದರು ಸಹಿ ಹಾಕಬೇಕಾಗುತ್ತದೆ. ರಾಜ್ಯಸಭೆಯಲ್ಲಿ ಕನಿಷ್ಠ ಅವಶ್ಯಕತೆ 50.

ಬೆಂಗಳೂರಿನ ಮತದಾರರ ಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಮಾ.16ರವರೆಗೆ ಅವಕಾಶ

ಜ್ಞಾನೇಶ್ ಕುಮಾರ್ ವಿರುದ್ಧ ಏಳು ಆರೋಪಗಳನ್ನು ನೊಟೀಸ್‌ನಲ್ಲಿ ಪಟ್ಟಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇವುಗಳಲ್ಲಿ ಪಕ್ಷಪಾತ ಧೋರಣೆ ಮತ್ತು ತಾರತಮ್ಯದ ನಡವಳಿಕೆ, ಚುನಾವಣಾ ವಂಚನೆಯ ತನಿಖೆಗೆ ಉದ್ದೇಶಪೂರ್ವಕ ಅಡಚಣೆ ಮತ್ತು ಸಾಮೂಹಿಕ ಮತದಾನದ ಹಕ್ಕು ನಿರಾಕರಣೆ ಸೇರಿದಂತೆ ಇತರ ಆರೋಪಗಳು ಸೇರಿವೆ.

ಈ ನೊಟೀಸ್‌ಗೆ ಇಂಡಿಯಾ ಒಕ್ಕೂಟಕ್ಕೆ ಸೇರಿದ ಸಂಸದರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಮುಂದೆ ಅಧಿಕೃತವಾಗಿ ಮೈತ್ರಿಕೂಟದ ಭಾಗವಲ್ಲದ ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರು ಸಹ ನೊಟೀಸ್‌ಗೆ ಸಹಿ ಹಾಕಿದ್ದಾರೆ ಎಂದು ಮೂಲವು ತಿಳಿಸಿದೆ.

ಆಡಳಿತಾರೂಢ ಬಿಜೆಪಿಗೆ ಜ್ಞಾನೇಶ್ ಕುಮಾರ್ ಹಲವು ಸಂದರ್ಭಗಳಲ್ಲಿ ಸಹಾಯ ಮಾಡಿದ್ದಾರೆ ಎಂದು ವಿರೋಧ ಪಕ್ಷಗಳು ಪದೇ ಪದೆ ಆರೋಪಿಸಿವೆ. ಈ ಆರೋಪಗಳು ವಿಶೇಷವಾಗಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿವೆ. ಇದು ಕೇಂದ್ರದಲ್ಲಿ ಆಡಳಿತ ಪಕ್ಷಕ್ಕೆ ಲಾಭ ತರುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಪ್ರಕ್ರಿಯೆಯ ನಡವಳಿಕೆಯ ಬಗ್ಗೆಯೂ ಕಳವಳ ವ್ಯಕ್ತವಾಗಿದೆ. ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿ ಚುನಾವಣಾ ಆಯೋಗವು ಈ ಪ್ರಕ್ರಿಯೆಯ ಸಮಯದಲ್ಲಿ ನಿಜವಾದ ಮತದಾರರನ್ನು ಡಿಲೀಟ್‌ ಮಾಡಿದೆ ಎಂದು ಆರೋಪಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ವಿರೋಧದ ಹಿಂದಿನ ಗುಟ್ಟೇನು ?

ಮುಖ್ಯ ಚುನಾವಣಾ ಆಯುಕ್ತರನ್ನು ತೆಗೆದುಹಾಕುವ ವಿಧಾನವು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರನ್ನು ತೆಗೆದುಹಾಕುವ ಕಾರ್ಯವಿಧಾನಕ್ಕೆ ಹೋಲುತ್ತದೆ. ಕಾನೂನಿನಡಿ ಸಾಬೀತಾದ ದುರುಪಯೋಗ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮಾತ್ರ ತೆಗೆದುಹಾಕಬಹುದು.

ಪದಚ್ಯುತಿಗೆ ಪ್ರಸ್ತಾವನೆಯನ್ನು ಸಂಸತ್ತಿನ ಯಾವುದೇ ಸದನದಲ್ಲಿ ಪರಿಚಯಿಸಬಹುದು ಮತ್ತು ವಿಶೇಷ ಬಹುಮತದಿಂದ ಅಂಗೀಕರಿಸಬೇಕು. ಇದರರ್ಥ ಸದನದ ಒಟ್ಟು ಸದಸ್ಯರ ಬಹುಮತ ಮತ್ತು ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತ ಇರಬೇಕು.

ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968ರ ಅಡಿ ಸಂಸತ್ತಿನ ಎರಡೂ ಸದನಗಳಲ್ಲಿ ಒಂದೇ ದಿನದಲ್ಲಿ ಅಂತಹ ಪ್ರಸ್ತಾವನೆಗೆ ನೊಟೀಸ್‌ ನೀಡಿದರೆ, ಎರಡೂ ಸದನಗಳಲ್ಲಿ ಪ್ರಸ್ತಾವನೆಯನ್ನು ಅಂಗೀಕರಿಸದ ಹೊರತು ಯಾವುದೇ ಸಮಿತಿಯನ್ನು ರಚಿಸಲಾಗುವುದಿಲ್ಲ. ಎರಡೂ ಸದನಗಳಲ್ಲಿ ಪ್ರಸ್ತಾವನೆಯನ್ನು ಅಂಗೀಕರಿಸಿದ ನಂತರ, ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಅಧ್ಯಕ್ಷರು ಜಂಟಿಯಾಗಿ ಸಮಿತಿಯನ್ನು ರಚಿಸುತ್ತಾರೆ.