ಮುಂಬೈ, ಆ. 20: 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಮುಂದಿನ ಜನ್ಮದಲ್ಲಿ ತಾನು ಖಂಡಿತವಾಗಿಯೂ ವೈದ್ಯನಾಗುತ್ತೇನೆ ಎಂದು ವೈದ್ಯಕೀಯ ಕಾಲೇಜು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಹೆತ್ತವರಿಗೆ ಹೇಳಿದ್ದ ಎನ್ನಲಾಗಿದೆ. ಈ ಬಗ್ಗೆ ಡೆತ್‌ನೋಟ್ ಲಭ್ಯವಾಗಿದೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವೈಜಾಪುರ ತಾಲೂಕಿನ ಖಂಡಾಲದಲ್ಲಿರುವ ತನ್ನ ಮನೆಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಸೂರಜ್ ಸುಭಾಷ್ ಶಿಂಧೆ ಎಂದು ಗುರುತಿಸಲಾಗಿದೆ. ತನ್ನ ಅಧ್ಯಯನ ಮತ್ತು ಭವಿಷ್ಯದ ಬಗ್ಗೆ ಅಪಾರ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸೂರಜ್, ದೇಶದ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಾಗಿ (NEET) ಗಾಗಿ ತನ್ನ ಮನೆಯ ಮೇಲಿನ ಮಹಡಿಯ ಕೋಣೆಯಲ್ಲಿ, ಎಂದಿನಂತೆ ಓದುತ್ತಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಅವನು ಭಾವನಾತ್ಮಕವಾಗಿ ಡೆತ್ ನೋಟ್‌ನಲ್ಲಿ ಬರೆದುಕೊಂಡಿದ್ದಾನೆ. “ಕ್ಷಮಿಸಿ, ಅಮ್ಮ ಮತ್ತು ಅಪ್ಪ. ಮುಂದಿನ ಜನ್ಮದಲ್ಲಿ ನಾನು ಖಂಡಿತವಾಗಿಯೂ ನಿಮಗಾಗಿ ವೈದ್ಯನಾಗುತ್ತೇನೆ. ದಯವಿಟ್ಟು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಸಂತೋಷವಾಗಿರಿ” ಎಂದು ಆತ್ಮಹತ್ಯಾ ಪತ್ರದಲ್ಲಿ ಬರೆಯಲಾಗಿದೆ.
ನೀಟ್ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ್ದು ಹೇಗೆ? ಸಿಬಿಐ ತನಿಖೆಯಲ್ಲಿ ತಿಳಿದ ರಹಸ್ಯವೇನು?
ಪ್ರಶ್ನೆ ಪತ್ರಿಕೆ ಮುಂಚಿತವಾಗಿ ಸೋರಿಕೆಯಾಗಿದೆ ಎಂಬ ಆರೋಪದ ನಂತರ ಮೇಯಲ್ಲಿ ನಡೆದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಜೆನ್ ಝೀಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕಾಯಿತು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಕಾಕ್ರೋಚ್ ಜನತಾ ಪಾರ್ಟಿಯು ಪ್ರತಿಭಟನೆಗಳನ್ನು ಹಿಂತೆಗೆದುಕೊಂಡಿತು. ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಾದ ನಂತರ, ಪರೀಕ್ಷಾ ಪ್ರಕ್ರಿಯೆಯಲ್ಲಿ, ಭದ್ರತಾ ಪ್ರೋಟೋಕಾಲ್‌ಗಳಲ್ಲಿನ ಸುಧಾರಣೆ ಕುರಿತು ಶಿಫಾರಸುಗಳನ್ನು ಮಾಡಲು ಶಿಕ್ಷಣ ಸಚಿವಾಲಯವು ಏಳು ಸದಸ್ಯರ ರಾಧಾಕೃಷ್ಣನ್ ಸಮಿತಿಯನ್ನು ರಚಿಸಿತು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸುಧಾರಣೆಗಳಿಗಾಗಿ ಸರ್ಕಾರವು ಇನ್ಫೋಸಿಸ್ ಸಹ-ಸಂಸ್ಥಾಪಕ ನಿಲೇಕಣಿ ನೇತೃತ್ವದಲ್ಲಿ ಉನ್ನತ ಅಧಿಕಾರದ ಕಾರ್ಯಪಡೆಯನ್ನು ಸ್ಥಾಪಿಸಿತ್ತು. ನೀಟ್-ಯುಜಿ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿರುವ ಎನ್‌ಟಿಎ (NTA) ಸಂಸ್ಥೆಯು, ಎಲ್ಲ ಅಗತ್ಯ ಮೂಲಸೌಕರ್ಯಗಳು, ಇತರ ತಾಂತ್ರಿಕ ಸಾಮರ್ಥ್ಯಗಳನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸದ್ಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿವೆ.