Road Accident: ಕಂದಕಕ್ಕುರುಳಿದ ಸೇನಾ ವಾಹನ; ಮೂವರು CRPF ಯೋಧರು ಸಾವು, 15 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಸಿಆರ್‌ಪಿಎಫ್ ವಾಹನ ಅಪಘಾತಕ್ಕೀಡಾಗಿದೆ. ವಾಹನ ಪಲ್ಟಿಯಾದಾಗ ಒಟ್ಟು 23 ಸಿಆರ್‌ಪಿಎಫ್ ಸಿಬ್ಬಂದಿ ಇದ್ದರು. ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಸಿಆರ್‌ಪಿಎಫ್ ವಾಹನ (CRPF jawans) ಅಪಘಾತಕ್ಕೀಡಾಗಿದೆ. (Road Accident) ಘಟನೆಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಉಧಂಪುರದ ಹೆಚ್ಚುವರಿ ಎಸ್ಪಿ ಸಂದೀಪ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಗಾಯಗೊಂಡ ಎಲ್ಲ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ವಾಹನ ಪಲ್ಟಿಯಾದಾಗ ಒಟ್ಟು 23 ಸಿಆರ್‌ಪಿಎಫ್ ಸಿಬ್ಬಂದಿ ಇದ್ದರು. ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಾಹನವು ಪಡೆಯ 187 ಬೆಟಾಲಿಯನ್‌ಗೆ ಸೇರಿದೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಮತ್ತು ಉಧಮ್‌ಪುರ ಸಂಸದ ಜಿತೇಂದ್ರ ಸಿಂಗ್ ಅವರು ಈ ಸುದ್ದಿಯನ್ನು ಧೃಡಪಡಿಸಿದ್ದಾರೆ. ತಕ್ಷಣವೇ ರಕ್ಷಣಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ನಾನು ಇದೀಗ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ, ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ನನಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ಸಂತಾಪ ಸೂಚಿಸಿದ್ದಾರೆ. ಉಧಮ್‌ಪುರ ಬಳಿ ಅಪಘಾತದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯ ನಷ್ಟದಿಂದ ದುಃಖಿತನಾಗಿದ್ದೇನೆ. ರಾಷ್ಟ್ರಕ್ಕೆ ಅವರ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಈ ಸುದ್ದಿಯನ್ನೂ ಓದಿ: Athani News: ಅಥಣಿ : ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು
ಕಳೆದ ವಾರ, ಲಡಾಖ್‌ನ ಲೇಹ್ ಜಿಲ್ಲೆಯಲ್ಲಿ ಮಿಲಿಟರಿ ಬೆಂಗಾವಲು ವಾಹನದ ಮೇಲೆ ಬಂಡೆಯೊಂದು ಉರುಳಿ ಬಿದ್ದು ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಘಟನೆಯಲ್ಲಿ ಹುತಾತ್ಮ ಇಬ್ಬರು ಸೈನಿಕರನ್ನು ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮತ್ತು ಲ್ಯಾನ್ಸ್ ದಫಾದರ್ ದಲ್ಜೀತ್ ಸಿಂಗ್ ಎಂದು ಗುರುತಿಸಲಾಗಿದೆ. ಲೇಹ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಗಾಲ್ವಾನ್‌ನ ಡರ್ಬುಕ್ ಬಳಿಯ ಚಾರ್ಬಾಗ್‌ನಲ್ಲಿ ದೊಡ್ಡ ಬಂಡೆಯೊಂದು ಉರುಳಿ ಮಿಲಿಟರಿ ಬೆಂಗಾವಲು ವಾಹನದ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ.