ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ISIS Terrorist: ಮುಂಬೈ ಏರ್‌ಪೋರ್ಟ್‌ನಲ್ಲಿ ಇಬ್ಬರು ಐಸಿಸ್‌ ಉಗ್ರರು ಅರೆಸ್ಟ್‌

ISIS sleeper cells arrested: ಭಾರತದಲ್ಲಿ ಐಸಿಸ್ ಕಾರ್ಯಾಚರಣೆ(ISIS Terrorist) ಸಂಪೂರ್ಣವಾಗಿ ಕಿತ್ತೊಗೆಯುವ ನಿಟ್ಟಿನಲ್ಲಿ ಎನ್‌ಐಎ ದೇಶವ್ಯಾಪಿ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ. ಈ ತನಿಖೆಯ ಭಾಗವಾಗಿ ಇಂದು ಇಬ್ಬರನ್ನು ಅರೆಸ್ಟ್‌ ಮಾಡಿದೆ. ಬಂಧಿತರನ್ನು ಡಯಾಪರ್‌ವಾಲಾ ಎಂದೂ ಕರೆಯಲ್ಪಡುವ ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಖಾನ್ ಎಂದು ಗುರುತಿಸಗಿದೆ. ಶಂಕಿತರು ಶುಕ್ರವಾರ ತಡರಾತ್ರಿ ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಇಬ್ಬರು ಐಸಿಸ್‌ ಸ್ಲೀಪರ್‌ ಸೆಲ್‌ಗಳು ಅರೆಸ್ಟ್‌

Profile Rakshita Karkera May 17, 2025 11:59 AM

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Mumbai airport) ಐಸಿಸ್‌ ಉಗ್ರ ಸಂಘಟನೆಯ ಸ್ಲೀಪರ್ ಸೆಲ್‌ನೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಐಸಿಸ್ ಕಾರ್ಯಾಚರಣೆ(ISIS Terrorist) ಸಂಪೂರ್ಣವಾಗಿ ಕಿತ್ತೊಗೆಯುವ ನಿಟ್ಟಿನಲ್ಲಿ ಎನ್‌ಐಎ ದೇಶವ್ಯಾಪಿ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ. ಈ ತನಿಖೆಯ ಭಾಗವಾಗಿ ಇಂದು ಇಬ್ಬರನ್ನು ಅರೆಸ್ಟ್‌ ಮಾಡಿದೆ. ಬಂಧಿತರನ್ನು ಡಯಾಪರ್‌ವಾಲಾ ಎಂದೂ ಕರೆಯಲ್ಪಡುವ ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಖಾನ್ ಎಂದು ಗುರುತಿಸಗಿದೆ. ಶಂಕಿತರು ಶುಕ್ರವಾರ ತಡರಾತ್ರಿ ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಎನ್‌ಐಎಯ ಅಧಿಕೃತ ಹೇಳಿಕೆಯ ಪ್ರಕಾರ, ಮಹಾರಾಷ್ಟ್ರದ ಪುಣೆಯಲ್ಲಿ 2023 ರಲ್ಲಿ ಸುಧಾರಿತ ಸ್ಫೋಟಕ ಸಾಧನಗಳ (ಐಇಡಿ) ತಯಾರಿಕೆ ಮತ್ತು ಪರೀಕ್ಷೆಯನ್ನು ಒಳಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರೂ ಮೋಸ್ಟ್‌ ವಾಂಟೆಡ್‌ ಉಗ್ರರಾಗಿದ್ದರು. ದೇಶಾದ್ಯಂತ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮಾಡಲಾದ ಸಂಚಿನಲ್ಲಿ ಇವರಿಬ್ಬರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರು ಸುಮಾರು ಎರಡು ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದರು. ಮುಂಬೈನ NIA ವಿಶೇಷ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೇ ಅವರ ಪತ್ತೆಗಾಗಿ ತಲೆಗೆ ₹3 ಲಕ್ಷ ನಗದು ಬಹುಮಾನವನ್ನು ಸಹ ಘೋಷಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ: JeM Terrorist: ಸೇನೆ ಬರಲಿ ನೋಡಿಕೊಳ್ತೇನೆ; ಎನ್‌ಕೌಂಟರ್‌ನಲ್ಲಿ ಹತನಾಗುವ ಮುನ್ನ ಉಗ್ರ ಅಮೀರ್‌ ತಾಯಿಯೊಂದಿಗೆ ನಡೆಸಿದ ವಿಡಿಯೊ ಕರೆ ವೈರಲ್‌

ಪುಣೆಯ ಕೊಂಡ್ವಾ ಪ್ರದೇಶದ ಬಾಡಿಗೆ ನಿವಾಸದಲ್ಲಿ ಶೇಖ್ ಮತ್ತು ಖಾನ್ ಐಇಡಿಗಳನ್ನು ಸಂಗ್ರಹಿಸಿಡುತ್ತಿದ್ದರು ಎಂಬುದು NIA ತನಿಖೆಯಿಂದ ತಿಳಿದುಬಂದಿದೆ. 2022-2023ರ ಅವಧಿಯಲ್ಲಿ, ಅವರು ಅದೇ ಸ್ಥಳದಲ್ಲಿ ಬಾಂಬ್ ತಯಾರಿಕೆ ತರಬೇತಿ ಕಾರ್ಯಾಗಾರವನ್ನೂ ಆಯೋಜಿಸಿದ್ದರು ಎಂದು ವರದಿಯಾಗಿದೆ. ಅಲ್ಲಿ ಅವರು ತಯಾರಿಸಿದ ಐಇಡಿಯನ್ನು ಪರೀಕ್ಷಿಸಲು ನಿಯಂತ್ರಿತ ಸ್ಫೋಟವನ್ನು ನಡೆಸಿದ್ದರು. ಈ ಇಬ್ಬರ ಮೇಲೂ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದೆ. ಜೊತೆಗೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಇತರ ಎಂಟು ಐಸಿಸ್ ಉಗ್ರರ ಮೇಲೂ ಆರೋಪಪಟ್ಟಿ ಸಲ್ಲಿಸಲಾಗಿದೆ.

ಮೊಹಮ್ಮದ್ ಇಮ್ರಾನ್ ಖಾನ್, ಮೊಹಮ್ಮದ್ ಯೂನಸ್ ಸಾಕಿ, ಅಬ್ದುಲ್ ಖಾದಿರ್ ಪಠಾಣ್, ಸಿಮಾಬ್ ನಾಸಿರುದ್ದೀನ್ ಕಾಜಿ, ಜುಲ್ಫಿಕರ್ ಅಲಿ ಬರೋಡಾವಾಲಾ, ಶಮಿಲ್ ನಾಚನ್, ಅಕಿಫ್ ನಾಚನ್ ಮತ್ತು ಶಹನವಾಜ್ ಆಲಂ ಈ ಹಿಂದೆಯೇ ಬಂಧನಕ್ಕೊಳಗಿರುವ ಉಗ್ರರು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಬಹು ನಿಬಂಧನೆಗಳ ಅಡಿಯಲ್ಲಿ ಎಲ್ಲಾ ಹತ್ತು ಆರೋಪಿಗಳ ವಿರುದ್ಧ NIA ಪ್ರಕರಣ ದಾಖಲಿಸಿದೆ. ಮುಂದಿನ ಕಾನೂನು ಕ್ರಮಗಳಿಗಾಗಿ ಇಂದು ಬಂಧನಕ್ಕೊಳಗಾಗಿರುವ ಇಬ್ಬರು ಆರೋಪಿಗಳನ್ನು NIA ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.