Accident: ತಮಿಳುನಾಡಿನಲ್ಲಿ ಘನಘೋರ ಘಟನೆ! ಹಳಿ ಕ್ರಾಸ್ ಮಾಡ್ತಿದ್ದ ಶಾಲಾ ಬಸ್‌ಗೆ ರೈಲು ಡಿಕ್ಕಿ
ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ (Accident) ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ (Tamilnadu news) ನಡೆದಿದೆ. ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.


ಚೆನ್ನೈ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ (Accident) ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ (Tamilnadu news) ನಡೆದಿದೆ. ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಶಾಲಾ ಬಸ್ ಚಾಲಕ ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ರೈಲು ಡಿಕ್ಕಿಯಾದ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದ್ದು, ಹಲವಾರು ಅಡಿಗಳಷ್ಟು ದೂರ ಹೋಗಿ ಬಿದ್ದಿದೆ. ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಗಾಯಗೊಂಡ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ರೈಲು ಬಂದಾಗ ಗೇಟ್ ತೆರೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆದರೆ ಕ್ರಾಸಿಂಗ್‌ಗೆ ಕಾರಣರಾದ ರೈಲ್ವೆ ಸಿಬ್ಬಂದಿ ಆ ಸಮಯದಲ್ಲಿ ಎಲ್ಲಿ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಇದು ಮಾನವಸಹಿತ ಕ್ರಾಸಿಂಗ್ ಆಗಿದ್ದು, ಪ್ರಯಾಣಿಕರ ರೈಲು ಇಲ್ಲಿ ಸಂಚರಿಸುತ್ತದೆ ಎಂದು ತಿಳಿದು ಬಂದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ರೈಲ್ವೆ ಕ್ರಾಸಿಂಗ್‌ಗಳಲ್ಲಿ, ವಿಶೇಷವಾಗಿ ಶಾಲಾ ವಾಹನಗಳು ಸಂಚರಿಸುವುದರಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಪ್ರತ್ಯೇಕ ಘಟನೆಯಲ್ಲಿ ಅಥಣಿ ಸಮೀಪದ ಬನಜವಾಡ ಕಾಲೇಜಿನ ಸಮೀಪ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಮೇಲೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ನಾಲ್ಕು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ನಿವಾಸಿಗಳಾದ ರಾಹುಲ್ ಮ್ಯಾಳಸಿ (25), ರಾಧಿಕಾ ರಾಹುಲ್ ಮ್ಯಾಳಸಿ (22) ಹಾಗೂ ಗಿರೀಶ್ ಅಶೋಕ್ ಬಿಳ್ಳೂರಗಿ (28) ಮತ್ತು ಕಾರಿನ ಚಾಲಕ ಸಂಗಮೇಶ ಗಿರೀಶ್ ಅಮರಗೊಂಡ (26) ಎಂಬುವರು ಸಾವನ್ನಪ್ಪಿದ್ದಾರೆ.
ಈ ಸುದ್ದಿಯನ್ನೂ ಓದಿ: Road Accident: ಹಸೆಮಣೆ ಏರಬೇಕಿದ್ದ ವರ ಮಸಣ ಸೇರಿದ; ಕಾಲೇಜಿನ ಗೋಡೆಗೆ ಕಾರು ಡಿಕ್ಕಿ ಹೊಡೆದು ಅವಘಡ
ಇನ್ನೋರ್ವ ವಿನಾಯಕ ತಿವಾರಿ ಎಂಬುವವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು SDRF ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.