Terrorist Arrested: ಪೂಂಚ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ; ಅಪಾರ ಶಸ್ತ್ರಾಸ್ತ್ರ ವಶಕ್ಕೆ
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ (Terrorist Arrested) ವಿರುದ್ಧದ ಕಾರ್ಯಾಚರಣೆ ನಡೆಯುತ್ತಿದೆ. ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಇಬ್ಬರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇಬ್ಬರನ್ನು ವಿಚಾರಣೆ ಮಾಡಿದ ನಂತರ, ಪೊಲೀಸ್ ತಂಡವು ಜಲಿಯನ್ ಗ್ರಾಮದಲ್ಲಿ ಶೇಖ್ ಅವರ ಬಾಡಿಗೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

-

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ (Terrorist Arrested) ವಿರುದ್ಧದ ಕಾರ್ಯಾಚರಣೆ ನಡೆಯುತ್ತಿದೆ. ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಇಬ್ಬರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ದಾಳಿಯ ಸಮಯದಲ್ಲಿ ಅಜಮಾಬಾದ್‌ನ ತಾರಿಕ್ ಶೇಖ್ ಮತ್ತು ಚೇಂಬರ್ ಗ್ರಾಮದ ರಿಯಾಜ್ ಅಹ್ಮದ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಅಜಮಾಬಾದ್‌ನಲ್ಲಿರುವ ಶೇಖ್ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಆತನನ್ನು ಮತ್ತು ಆತನ ಸಹಚರ ಅಹ್ಮದ್‌ನನ್ನು ಬಂಧಿಸಿದರು.
ಇಬ್ಬರನ್ನು ವಿಚಾರಣೆ ಮಾಡಿದ ನಂತರ, ಪೊಲೀಸ್ ತಂಡವು ಜಲಿಯನ್ ಗ್ರಾಮದಲ್ಲಿ ಶೇಖ್ ಅವರ ಬಾಡಿಗೆ ನಿವಾಸದ ಮೇಲೆ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದು, ಇನ್ನೂ ಹಲವರನ್ನು ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಆಗಸ್ಟ್ 1 ರಿಂದ ಆರಂಭಗೊಂಡು ಸತತವಾಗಿ 10 ದಿನಗಳವರೆಗೆ ಮುಂದುವರಿದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರೆ, ಕನಿಷ್ಠ ಒಂಬತ್ತು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮೊದಲ ಎರಡು ದಿನಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಬೇಟೆ ಆಡಲಾಗಿತ್ತು. ಈ ಕಾರ್ಯಾಚರಣೆ ಸಂದರ್ಭದಲ್ಲಿ ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಹಾಗೂ ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮರಾಗಿದ್ದರು. ದೋಡಾ ಜಿಲ್ಲೆಯ 15 ಸ್ಥಳಗಳಲ್ಲಿ ಉಗ್ರರ ಪತ್ತೆ ಕಾರ್ಯ ನಡೆಸಲಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಶಸ್ತ್ರಾಸ್ತ್ರಗಳನ್ನು ಪೂರೈಸುವ ಮಾಹಿತಿ ಆಧರಿಸಿ, ಉಗ್ರರು ಅವಿತಿರುವ ಶಂಕೆ ಮೇರೆಗೆ ಮನೆಗಳನ್ನು ಗುರಿಯಾಗಿಸಿಕೊಂಡು ಅಂದು ದಾಳಿ ನಡೆಸಲಾಗಿತ್ತು.
ಈ ಸುದ್ದಿಯನ್ನೂ ಓದಿ: Naxal Encounter: ಭದ್ರತಾಪಡೆಗಳ ಬೇಟೆ ; 35 ಲಕ್ಷ ರೂ. ಇನಾಮು ಹೊಂದಿದ್ದ ನಕ್ಸಲರ ಎನ್‌ಕೌಂಟರ್
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರದಲ್ಲಿ ‘ಆಪರೇಷನ್ ಮಹಾದೇವ್’ ಅಡಿಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ಈ ವಾರದ ಆರಂಭದಲ್ಲಿ, ಶ್ರೀನಗರದ ದಾಚಿಗಾಮ್‌ನಲ್ಲಿ ದಾಳಿಯ ಮಾಸ್ಟರ್‌ಮೈಂಡ್ ಸುಲೇಮಾನ್ ಶಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಮರುದಿನ, ‘ಆಪರೇಷನ್ ಶಿವ ಶಕ್ತಿ’ ಅಡಿಯಲ್ಲಿ ಪೂಂಚ್ ವಲಯದ ಗಡಿರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಇನ್ನಿಬ್ಬರು ಭಯೋತ್ಪಾದಕರನ್ನು ನಿಷ್ಕ್ರಿಯಗೊಳಿಸಲಾಯಿತು.