ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Building Collapse: 4 ಅಂತಸ್ತಿನ ಕಟ್ಟಡದ ಚಾವಣಿ ಕುಸಿದು 6 ಮಂದಿ ದುರ್ಮರಣ

ಮಹಾರಾಷ್ಟ್ರದ ಥಾಣೆಯಲ್ಲಿ 4 ಅಂತಸ್ತಿನ ಕಟ್ಟಡದ ಚಾವಣಿ ಕುಸಿದುಬಿದ್ದು 2 ವರ್ಷದ ಮಗು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ (ಮೇ 20) ನಡೆದಿದೆ. ಕಲ್ಯಾಣ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಮೃತರಲ್ಲಿ ನಾಲ್ವರು ಮಹಿಳೆಯರೂ ಇದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

4 ಅಂತಸ್ತಿನ ಕಟ್ಟಡದ ಚಾವಣಿ ಕುಸಿದು  6 ಮಂದಿ ದುರ್ಮರಣ

Profile Ramesh B May 20, 2025 8:37 PM

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ 4 ಅಂತಸ್ತಿನ ಕಟ್ಟಡದ ಚಾವಣಿ ಕುಸಿದುಬಿದ್ದು (Building Collapse) 2 ವರ್ಷದ ಮಗು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ (ಮೇ 20) ನಡೆದಿದೆ. ಕಲ್ಯಾಣ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಮೃತರಲ್ಲಿ ನಾಲ್ವರು ಮಹಿಳೆಯರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಲ್ಯಾಣ್ ಪೂರ್ವದ ಮಂಗಳರಾಘೊ ನಗರ ಪ್ರದೇಶದಲ್ಲಿರುವ ಸಪ್ತಶೃಂಗಿ ಕಟ್ಟಡದ ನಾಲ್ಕನೇ ಮಹಡಿಯ ಸ್ಲ್ಯಾಬ್ ಅಪರಾಹ್ನ 2:15ರ ಸುಮಾರಿಗೆ ಕುಸಿದು ಬಿದ್ದಿದೆ.

4ನೇ ಮಹಡಿಯ ಸ್ಲ್ಯಾಬ್ ಕುಸಿದಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿವರಿಸಿದರು. ಮೃತರನ್ನು ನಮಸ್ವಿ ಶ್ರೀಕಾಂತ್ ಶೇಲಾರ್ (2), ಪ್ರಮೀಳಾ ಕಲ್ಚರಣ್ ಸಾಹು (56), ಸುನೀತಾ ನೀಲಾಂಚಲ್ ಸಾಹು (38), ಸುಶೀಲಾ ನಾರಾಯಣ ಗುಜಾರ್ (78), ವೆಂಕಟ್ ಭೀಮಾ ಚವ್ಹಾಣ್ (42) ಮತ್ತು ಸುಜಾತಾ ಮನೋಜ್ ವಾಡಿ (38) ಎಂದು ಗುರುತಿಸಲಾಗಿದೆ.



ಈ ಸುದ್ದಿಯನ್ನೂ ಓದಿ: Fire Accident: ಆಳಂದದಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ಪಠ್ಯ ಪುಸ್ತಕಗಳು ಸುಟ್ಟು ಭಸ್ಮ

ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು, ಅವರಲ್ಲಿ 4 ವರ್ಷದ ಇಬ್ಬರು ಮಕ್ಕಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಲ್ಯಾಣ್ ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ಇಲಾಖೆ ಮತ್ತು ಥಾಣೆ ವಿಪತ್ತು ನಿರ್ವಹಣಾ ಪಡೆ (TDRF)ಯ ತುರ್ತು ಪ್ರತಿಕ್ರಿಯೆ ತಂಡಗಳು ಅವಶೇಷಗಳನ್ನು ತೆರವುಗೊಳಿಸುವಲ್ಲಿ ನಿರತವಾಗಿವೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕಾರಣ ಕಂಡುಹಿಡಿಯಲು ತನಿಖೆ ಕೈಗೆತ್ತಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿವರ ಇನ್ನಷ್ಟೇ ಹೊರ ಬರಬೇಕಿದೆ.

ಮಹಾರಾಷ್ಟ್ರದಲ್ಲಿ ಬೆಂಕಿ ಅವಘಡ: 8 ಮಂದಿ ಸಜೀವ ದಹನ

ಮುಂಬೈ: ಮೇ 18ರಂದು ಮಹಾರಾಷ್ಟ್ರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಮೂವರು ಮಹಿಳೆಯರು, ಮಕ್ಕಳು ಸೇರಿ 8 ಮಂದಿ ಮೃತಪಟ್ಟಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ದುರ್ಘಟನೆ ವರದಿಯಾಗಿದೆ. ಸೋಲಾಪುರ ಜಿಲ್ಲೆಯ ಬಟ್ಟೆ ಕಾರ್ಖಾನೆಯೊಂದರಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿತ್ತು. ಮುಂಬೈಯಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಟೆಕ್ಸ್‌ಟೈಲ್ ಮಿಲ್ಸ್‌ನಲ್ಲಿ ಬೆಳಗಿನ ಜಾವ 3:45ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತು ಎಂದು ಪೊಲೀಸರು ತಿಳಿಸಿದ್ದರು.

ಮೃತರಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್‌ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಸೇರಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ನಿಯಂತ್ರಿಸಲು ಐದರಿಂದ ಆರು ಗಂಟೆಗಳು ಬೇಕಾಯಿತು.