ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Tahawwur Rana: ಕುಟುಂಬಸ್ಥರ ಜೊತೆ ಮಾತನಾಡಲು ಉಗ್ರ ತಹವ್ವೂರ್ ರಾಣಾಗೆ ಅನುಮತಿ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವೂರ್ ರಾಣಾಗೆ (Tahawwur Rana) ಕುಟುಂಬಸ್ಥರ ಜೊತೆಗೆ ಮಾತನಾಡಲು ಕೋರ್ಟ್ ಅನುಮತಿ ನೀಡಿದೆ. ಈ ಆದೇಶವು ಜೈಲು ಕೈಪಿಡಿಗೆ ಅನುಗುಣವಾಗಿರುತ್ತದೆ ಮತ್ತು ತಿಹಾರ್ ಜೈಲು ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಇರುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವೂರ್ ರಾಣಾಗೆ (Tahawwur Rana) ಕುಟುಂಬಸ್ಥರ ಜೊತೆಗೆ ಮಾತನಾಡಲು ಕೋರ್ಟ್ ಅನುಮತಿ ನೀಡಿದೆ.ಈ ಕುರಿತಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಕುಟುಂಬಸ್ಥರಿಗೆ ಕರೆ ಮಾಡಿ ಪೋನ್ ಮೂಲಕ ಮಾತನಾಡಲು ಉಗ್ರ ಉಗ್ರ ತಹವ್ವೂರ್ ರಾಣಾಗೆ ಅವಕಾಶ ನೀಡಿದೆ.

ಈ ಆದೇಶವು ಜೈಲು ಕೈಪಿಡಿಗೆ ಅನುಗುಣವಾಗಿರುತ್ತದೆ ಮತ್ತು ತಿಹಾರ್ ಜೈಲು ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಇರುತ್ತದೆ ಎಂದು ನ್ಯಾಯಾಧೀಶರು ಹೇಳಿದರು. ಸೋಮವಾರದಿಂದ 10 ದಿನಗಳಲ್ಲಿ ರಾಣಾ ಅವರ ಆರೋಗ್ಯದ ಬಗ್ಗೆ ಹೊಸ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ತಹವ್ವೂರ್ ಹುಸೇನ್‌ ರಾಣಾ (64)ನನ್ನು ಈ ತಿಂಗಳ ಆರಂಭದಲ್ಲಿ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಅಮೆರಿಕದಿಂದ ಭಾರತಕ್ಕೆ ಕರೆತರಲಾಯಿತು. 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ಗಳಲ್ಲಿ ಒಬ್ಬನೆಂದು ಗುರುತಿಸಲ್ಪಡುವ ಆತನ ವಿರುದ್ಧ ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವುದು, ಕೊಲೆ ಮತ್ತು ಫೋರ್ಜರಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ.

26/11ರ ಮುಂಬೈ ದಾಳಿ ಬಗ್ಗೆ ರಾಣಾನನ್ನು ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ. ಈ ಭಯೋತ್ಪಾದಕ ದಾಳಿಯ ಇನ್ನೊಬ್ಬ ಸಂಚುಕೋರ ಡೇವಿಡ್ ಹೆಡ್ಲಿಯೊಂದಿಗಿನ ಫೋನ್‌ ಸಂಭಾಷಣೆಯಲ್ಲಿ ರಾಣಾ ಮುಂಬೈ ಮೇಲೆ ದಾಳಿ ನಡೆಸಿದ ಲಷ್ಕರ್ ಭಯೋತ್ಪಾದಕರಿಗೆ ಪಾಕಿಸ್ತಾನವು ಬಹುಮಾನ ನೀಡಬೇಕು ಎಂದು ಹೇಳಿದ್ದ ಎಂಬುದಾಗಿ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನೂ ಓದಿ: Tahawwur Rana Custody: ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಕಸ್ಟಡಿ ಅವಧಿ ವಿಸ್ತರಣೆ

2008ರ ನ. 26ರಂದು 10 ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಅರೇಬಿಯನ್ ಸಮುದ್ರದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈ ನುಸುಳಿ ರೈಲ್ವೆ ನಿಲ್ದಾಣ, ಹೋಟೆಲ್‌ ಮತ್ತು ಯಹೂದಿ ಕೇಂದ್ರದ ಮೇಲೆ ಸಂಘಟಿತ ದಾಳಿ ನಡೆಸಿತು. ಈ ದಾಳಿಯಲ್ಲಿ 166 ಜನರು ಸಾವನ್ನಪ್ಪಿದ್ದರು.

Vishakha Bhat Heggar

View all posts by this author