Delhi Riots: ಗಲಭೆ ಕೇಸ್; ಸಚಿವ ಕಪಿಲ್ ಮಿಶ್ರಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶ
2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಕಾನೂನು ಸಚಿವ ಕಪಿಲ್ ಮಿಶ್ರಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.


ನವದೆಹಲಿ: 2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಕಾನೂನು ಸಚಿವ ಕಪಿಲ್ ಮಿಶ್ರಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸುವಾಗ, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರು, ಅಪರಾಧ ನಡೆದ ಸಮಯದಲ್ಲಿ ಮಿಶ್ರಾ ಆ ಪ್ರದೇಶದಲ್ಲಿದ್ದರು ಎಂಬುದು ಸ್ಪಷ್ಟವಾಗಿದೆ, ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಹೇಳಿದ್ದಾರೆ. ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಮಿಶ್ರಾ ಅವರ ಪಾತ್ರವಿಲ್ಲ ಎಂದು ವಾದಿಸಿ, ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಲು ವಿರೋಧಿಸಿದ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ನಡೆಸುತ್ತಿದ್ದಾರೆ.
ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನಡೆಸುತ್ತಿದ್ದರು. ಗಲಭೆಯಲ್ಲಿ ಮಿಶ್ರಾ ಅವರ ಪಾತ್ರವಿಲ್ಲ ಎಂದು ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ ನಂತರ ಈ ಅರ್ಜಿ ಸಲ್ಲಿಸಲಾಗಿತ್ತು. ಇಲ್ಯಾಸ್, ಫೆಬ್ರವರಿ 23, 2020 ರಂದು ಮಿಶ್ರಾ ಮತ್ತು ಇತರರು ಕರ್ದಂಪುರಿಯಲ್ಲಿ ರಸ್ತೆಯನ್ನು ತಡೆದು ಬೀದಿ ವ್ಯಾಪಾರಿಗಳ ಬಂಡಿಗಳನ್ನು ನಾಶಪಡಿಸುವುದನ್ನು ನೋಡಿದ್ದೇನೆ ಎಂದು ಆರೋಪಿಸಿದ್ದಾರೆ.ದೆಹಲಿ ಸಚಿವರ ಪಕ್ಕದಲ್ಲಿ ನಿಂತು ಆಗಿನ ಪೊಲೀಸ್ ಉಪ ಆಯುಕ್ತ (ಈಶಾನ್ಯ) ಮತ್ತು ಇತರ ದೆಹಲಿ ಪೊಲೀಸ್ ಅಧಿಕಾರಿಗಳು ನಿಂತು, ಪ್ರತಿಭಟನಾಕಾರರು ಆ ಪ್ರದೇಶವನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ: Delhi Riots Case: ದೆಹಲಿ ಗಲಭೆ ಪ್ರಕರಣ- ಉಮರ್ ಖಾಲಿದ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು
ಮೂರು ದಿನಗಳಲ್ಲಿ ನಡೆದ ಮೂರು ಘಟನೆಗಳನ್ನು ಇಲ್ಯಾಸ್ ವಿವರಿಸಿದ್ದು, ಆ ಸಮಯದಲ್ಲಿ ದಯಾಳ್‌ಪುರ ಎಸ್‌ಎಚ್‌ಒ, ಮುಸ್ತಫಾಬಾದ್ ಶಾಸಕ ಮೋಹನ್ ಸಿಂಗ್ ಬಿಶ್ತ್, ಮಾಜಿ ಶಾಸಕ ಜಗದೀಶ್ ಪ್ರಧಾನ್ ಮತ್ತು ಸತಾಲ್ ಸನ್ಸಾದ್ ಅವರೊಂದಿಗೆ ಈಶಾನ್ಯ ದೆಹಲಿಯಾದ್ಯಂತ ಮಸೀದಿಗಳನ್ನು ಧ್ವಂಸ ಮಾಡಿದ್ದನ್ನು ತಾನು ನೋಡಿದ್ದೇನೆ ಎಂದು ಹೇಳಿದ್ದಾರೆ.ಇದಕ್ಕೂ ಮೊದಲು, ಫೆಬ್ರವರಿ 27 ರಂದು, ದೆಹಲಿ ಪೊಲೀಸರು ಅರ್ಜಿಯನ್ನು ತಳ್ಳಿ ಹಾಕಿದ್ದರು. ಸಚಿವರ ಪಾತ್ರವನ್ನು ಈಗಾಗಲೇ ತನಿಖೆ ಮಾಡಲಾಗಿದೆ ಎಂದು ಹೇಳಿದ್ದರು.