ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೀಟ್ ಪರೀಕ್ಷೆಯಲ್ಲಿ ಪಾಸಾದ್ರೂ ಕೌನ್ಸೆಲಿಂಗ್‌ನಲ್ಲಿ ವಿಫಲ: 21 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

NEET Student Self-harming: 21 ವರ್ಷದ ವಿದ್ಯಾರ್ಥಿನಿಯೊಬ್ಬಳು ನೀಟ್-ಯುಜಿ ಕೌನ್ಸೆಲಿಂಗ್‌ನ ಮೊದಲ ಸುತ್ತಿನಲ್ಲಿ ವೈದ್ಯಕೀಯ ಸೀಟು ಪಡೆಯಲು ವಿಫಲಳಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶ್ರುತಿ ಎಂದು ಗುರುತಿಸಲಾಗಿದೆ.

ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ 21 ವರ್ಷದ ನೀಟ್ ವಿದ್ಯಾರ್ಥಿನಿ ಶ್ರುತಿ (ಸಂಗ್ರಹ ಚಿತ್ರ)

ಚೆನ್ನೈ, ಆ. 30: 21 ವರ್ಷದ ವಿದ್ಯಾರ್ಥಿನಿಯೊಬ್ಬಳು ನೀಟ್-ಯುಜಿ ಕೌನ್ಸೆಲಿಂಗ್‌ನ ಮೊದಲ ಸುತ್ತಿನಲ್ಲಿ ವೈದ್ಯಕೀಯ ಸೀಟು ಪಡೆಯಲು ವಿಫಲಳಾಗಿದ್ದಕ್ಕೆ ಆತ್ಮಹತ್ಯೆ (NEET Student Self-harming) ಮಾಡಿಕೊಂಡಿರುವ ಘಟನೆ ತಮಿಳುನಾಡಿನ (Tamil Nadu) ತಿರುನಲ್ವೇಲಿಯಲ್ಲಿ ನಡೆದಿದೆ. ಶ್ರುತಿ ಲಯಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆಯ ಪೋಷಕರು ಐಟಿ ಕ್ಷೇತ್ರದಲ್ಲಿ ಉದ್ಯೋಗಿಗಳಾಗಿದ್ದಾರೆ. ಶ್ರುತಿಗೆ ವೈದ್ಯೆಯಾಗಬೇಕೆಂಬ ಮದಹಾಸೆಯಿತ್ತು ಎನ್ನಲಾಗಿದೆ.

ನೀಟ್ ಪರೀಕ್ಷೆ ತಯಾರಿ ನಡೆಸುತ್ತಿದ್ದ ಶ್ರುತಿ ನೀಟ್ ಕೋಚಿಂಗ್ ಸೆಂಟರ್‌ಗೆ ಸೇರಿದ್ದಳು. ಕಳೆದ ವರ್ಷ ನೀಟ್-ಯುಜಿ ಪರೀಕ್ಷೆ ಬರೆದ ನಂತರ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗದಿದ್ದರೂ, ಮತ್ತೊಂದು ಪ್ರಯತ್ನಕ್ಕೆ ತೀವ್ರವಾಗಿ ತಯಾರಿ ನಡೆಸಿದ್ದಳು. ಈ ವರ್ಷ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾದಳು.

ಆದರೆ ಇತ್ತೀಚೆಗೆ ಬಿಡುಗಡೆಯಾದ ಮೊದಲ ಸುತ್ತಿನ ಕೌನ್ಸೆಲಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲದಿರುವುದನ್ನು ತಿಳಿದು ಆಕೆ ತುಂಬಾ ದುಃಖಿತಳಾಗಿದ್ದಳು ಎನ್ನಲಾಗಿದೆ. ರಾತ್ರಿ ಎಂದಿನಿಂತೆ ಮಲಗುವ ಸಮಯದಲ್ಲಿ ತನ್ನ ಕೋಣೆ ಸೇರಿಕೊಂಡಿದ್ದಾಳೆ. ಆದರೆ, ಮರುದಿನ ಬೆಳಗ್ಗೆ ಆಕೆ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಪೋಷಕರು ಗಾಬರಿಯಾಗಿದ್ದಾರೆ.

14ನೇ ಜೆಪಿಎಸ್‌ಸಿ ಪರೀಕ್ಷೆ ರದ್ದು? ನೀಟ್ ಬಳಿಕ ಮತ್ತೊಂದು ವಿವಾದ ಎಬ್ಬಿಸಿದ ಜಾರ್ಖಂಡ್ ನಾಗರಿಕ ಸೇವಾ ಪರೀಕ್ಷೆ

ಶ್ರುತಿಯ ಕುಟುಂಬ ಸದಸ್ಯರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರು. ಈ ವೇಳೆ ಆಕೆ ಮನೆಯ ಸಮೀಪವಿರುವ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, ಆಕೆಯ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಸೆಪ್ಟೆಂಬರ್‌ 5ರಂದು ನೀಟ್ ಅಕ್ರಮದ ವಿರುದ್ಧ ಸಿಜೆಪಿ ಮತ್ತೆ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ. ಮೆರವಣಿಗೆಯು ಇಂಡಿಯಾ ಗೇಟ್‌ನಿಂದ ಆರಂಭವಾಗಿ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ನಡೆಯಲಿದೆ. ನೀಟ್ ಆಕಾಂಕ್ಷಿಗಳಾಗಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಹಿಂದಿನ ಪ್ರತಿಭಟನೆಗಳಲ್ಲಿ ಪೊಲೀಸ್ ಕ್ರಮದಿಂದಾಗಿ ತೊಂದರೆಗೊಳಗಾದವರು ಮೆರವಣಿಗೆಗೆ ನೇತೃತ್ವ ವಹಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಜುಲೈ 25ರಂದು ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಘಟನೆ ತನ್ನ ಪ್ರತಿಭಟನೆಯನ್ನು ಹಿಂಪಡೆದುಕೊಂಡಿತ್ತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿ ಹಲವು ಬೇಡಿಕೆಗಳನ್ನು ಸಂಘಟನೆ ಮುಂದಿಟ್ಟಿತ್ತು.