ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಮರಿಗೆ ಉರುಳಿ 3 ಯೋಧರು ಮೃತ್ಯು
Indian Army vehicle: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜಿತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಂಬನ್ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು (Indian Army vehicle) ಕಮರಿಗೆ ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜಿತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ವಾಹನ ಅವಶೇಷ, ಸೈನಿಕರ ಮೃತದೇಹ ಕಂಡು ಬಂದಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಬೆಂಗಾವಲು ಪಡೆಯ ಭಾಗವಾಗಿದ್ದ ಟ್ರಕ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಳಗ್ಗೆ 11.30ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ರಕ್ಷಣಾ ಕಾರ್ಯಾಚರಣೆಯ ದೃಶ್ಯ:
An army truck met with an accident near Battery Chashma #Ramban on Jammu-Srinagar National Highway. The truck fell into a 600 feet deep gorge. By the time the news came out, 2 soldiers had died on the spot in this accident.#JammuKashmir pic.twitter.com/rkHyJJxSyi
— Devesh , वनवासी (@Devesh81403955) May 4, 2025
#BreakingNews #Army vehicle plunges into gorge in #Ramban, three soldiers martyred pic.twitter.com/1jVgU3oszb
— Upma Sharma (@UpmaSharma2608) May 4, 2025
ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಅಪಘಾತಕ್ಕೆನು ಕಾರಣ ಎನ್ನುವುದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಿಂದೆಯೂ ನಡೆದಿತ್ತು ಅಪಘಾತ
ಈ ವರ್ಷದ ಜನವರಿಯಲ್ಲಿಯೂ ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನವೊಂದು ಕಂದಕಕ್ಕೆ ಉರುಳಿ 3 ಸೈನಿಕರು ಮೃತಪಟ್ಟ ಘಟನೆ ನಡೆದಿತ್ತು. ಹವಾಮಾನ ವೈಪರೀತ್ಯದಿಂದ ಬಂಡಿಪೋರಾ ಜಿಲ್ಲೆಯ ಎಸ್‌ಕೆ ಬಾಲದಲ್ಲಿ ವಾಹನ ಕಂದಕಕ್ಕೆ ಉರುಳಿತ್ತು. ಕೆಟ್ಟ ಹವಾಮಾನ ಮತ್ತು ರಸ್ತೆ ಸರಿಯಾಗಿ ಗೋಚರಿಸದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಸುಮಾರು 200 ಅಡಿ ಆಳಕ್ಕೆ ಉರುಳಿ ಬಿದ್ದಿತ್ತು.