Building Collapses: ದೆಹಲಿಯ ಮುಸ್ತಫಾಬಾದ್‌ನಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ಶನಿವಾರ ಮುಂಜಾನೆ ದೆಹಲಿಯ ಮುಸ್ತಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಅವಶೇಷದ ಒಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಈ ವರೆಗೆ 14 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ


ನವದೆಹಲಿ: ಶನಿವಾರ ಮುಂಜಾನೆ ದೆಹಲಿಯ ಮುಸ್ತಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. (Building Collapses) ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಅವಶೇಷದ ಒಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಈ ವರೆಗೆ 14 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಕ್ಷಣವೇ ರಕ್ಷಣಾ ಕಾರ್ಯ ಪ್ರಾರಂಭಿಸಿದ್ದಾರೆ. ಅಗ್ನಿಶಾಮಕ ಸೇವೆಗಳು ಮತ್ತು ದೆಹಲಿ ಪೊಲೀಸರ ತಂಡಗಳನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ ತಿಳಿಸಿದ್ದಾರೆ.
#WATCH | Latest visuals from the Mustafabad area of Delhi, where several people are feared trapped after a building collapsed today, early morning. Rescue operations underway. pic.twitter.com/X2sOUP9QLR
— ANI (@ANI) April 19, 2025
14 ಜನರನ್ನು ರಕ್ಷಿಸಲಾಗಿದೆ, ಮತ್ತು ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು 8-10 ಜನರು ಇನ್ನೂ ಸಿಕ್ಕಿಹಾಕಿಕೊಂಡಿರುವ ಶಂಕೆ ಇದೆ ಅಧಿಕಾರಿಗಳು ತಿಳಿಸಿದ್ದಾರೆ. ಕುಸಿತದ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ಮಾಡುತ್ತೇವೆ ಎಂದು ಸಂದೀಪ್ ಲಂಬಾ ತಿಳಿಸಿದ್ದಾರೆ. ಘಟನೆಯ ಬಗ್ಗೆ ಬೆಳಗಿನ ಜಾವ 2:50 ರ ಸುಮಾರಿಗೆ ಕರೆ ಬಂದಿದೆ ಎಂದು ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅತ್ವಾಲ್ ತಿಳಿಸಿದ್ದಾರೆ. ನಾವು ಸ್ಥಳಕ್ಕೆ ತಲುಪಿದಾಗ ಇಡೀ ಕಟ್ಟಡ ಕುಸಿದಿದೆ ಮತ್ತು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎನ್‌ಡಿಆರ್‌ಎಫ್ ಮತ್ತು ದೆಹಲಿ ಅಗ್ನಿಶಾಮಕ ಸೇವೆಗಳು ಜನರನ್ನು ರಕ್ಷಿಸಲು ಕೆಲಸ ಮಾಡುತ್ತಿವೆ" ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: Viral Video: ಬಹುಮಹಡಿ ಕಟ್ಟಡದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ- ಈ ವಿಡಿಯೊ ನೋಡಿದ್ರೆ ಎದೆ ಝಲ್ಲೆನ್ನುತ್ತೆ!
ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾದ ಕೆಲವೇ ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ. ಕಳೆದ ವಾರ, ಮಧು ವಿಹಾರ್ ಬಳಿ ಭಾರೀ ಧೂಳಿನ ಬಿರುಗಾಳಿಯ ಸಮಯದಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು. ಶನಿವಾರ ನಡೆದ ಪ್ರತ್ಯೇಕ ಘಟನೆಯಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ಬಿರುಗಾಳಿಯಿಂದಾಗಿ ಮನೆ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ.