ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿತ್ತು ಕಥುವಾ (Cloudburst) ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ನಂತರ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. "ಜೋಧ್ ಖಾದ್ ಮತ್ತು ಜುಥಾನಾ ಸೇರಿದಂತೆ ಕಥುವಾ ಜಿಲ್ಲೆಯ ಹಲವಾರು ಭಾಗಗಳಲ್ಲಿ ಭೂಕುಸಿತದಿಂದ ಸಂಭವಿಸಿದ ದುರಂತ ಜೀವಹಾನಿ ಮತ್ತು ಹಾನಿಯ ಬಗ್ಗೆ ದುಖಃ ವ್ಯಕ್ತಪಡಿಸಿದ ಸಿಎಂ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಗತ್ಯವಿರುವ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ.
4 dead, many injured after a cloudburst cut off a remote village in Kathua district of Jammu and Kashmir.
— Vani Mehrotra (@vani_mehrotra) August 17, 2025
The cloudburst hit Jod Ghati in Rajbagh area of the district during the intervening night of Saturday and Sunday.#Kathua #JammuKashmir pic.twitter.com/8uod9zI0rN
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೀಗ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಜಂಟಿ ತಂಡವು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಇಲ್ಲಿಯವರೆಗೆ ನಾಲ್ಕು ಶವಗಳನ್ನು ಹೊರತೆಗೆಯಲಾಗಿದ್ದು, ಆರು ಮಂದಿ ಗಾಯಗೊಂಡವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲಿ ಹಾಗೂ ಲಖನ್‌ಪುರದ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಭೂಕುಸಿತಗಳು ವರದಿಯಾಗಿವೆ.
ಈ ಸುದ್ದಿಯನ್ನೂ ಓದಿ: Cloudburst: ಕಿಶ್ತ್ವಾರ್ ಮೇಘಸ್ಫೋಟದ ಭೀಕರತೆ ಕ್ಯಾಮೆರಾದಲ್ಲಿ ಸೆರೆ: ಬೆಚ್ಚಿಬೀಳಿಸುವ ವಿಡಿಯೊ ಇಲ್ಲಿದೆ
ಮೇಘಸ್ಫೋಟ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಕಥುವಾ ಎಸ್‌ಎಸ್‌ಪಿ ಶೋಭಿತ್ ಸಕ್ಸೇನಾ ಅವರೊಂದಿಗೆ ಮಾತನಾಡಿದೆ. ಈ ವರೆಗೆ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ ಮತ್ತು ಕಥುವಾ ಪೊಲೀಸ್ ಠಾಣೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ನಾಗರಿಕ ಆಡಳಿತ, ಮಿಲಿಟರಿ ಮತ್ತು ಅರೆಸೇನಾ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆಂದು ತಿಳಿಸಿದ್ದಾರೆ.