ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರ ರಕ್ಷಣೆ
ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರ ರಕ್ಷಣೆ




ಶ್ರೀನಗರ: ರಾಂಬನ್ ಜಿಲ್ಲೆಯ ಮೇಕರ್‌ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತ ದಲ್ಲಿರುವ ಸುರಂಗದ ಒಂದು ಭಾಗ ಕುಸಿದು, ಪರಿಣಾಮ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದೆ.
ಸುರಂಗದಲ್ಲಿ 10 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪ್ರಸ್ತುಕ ಸ್ಥಳದಲ್ಲಿ ರಕ್ಷಣಾ ಕಾರ್ಯಾ ಚರಣೆ ಆರಂಭಗೊಂಡಿದೆ.
'ರಾಂಬನ್‌ನ ಮೇಕರ್‌ಕೋಟೆ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಖೂನಿ ನಾಲಾದಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ 10 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಈಗಾಗಲೇ ನಾಲ್ವರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾ ಚರಣೆ ಮುಂದುವರಿದಿದೆ' ಎಂದು ರಾಂಬನ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.