ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pakistani Nationals: ದಿಲ್ಲಿಯಲ್ಲಿರುವ 5,000 ಪಾಕಿಸ್ತಾನಿ ಪ್ರಜೆಗಳಿಗೆ ದೇಶ ಬಿಡಲು ಆದೇಶ

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬಳಿಕ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳ ವೀಸಾವನ್ನು ರದ್ದುಗೊಳಿಸಿದೆ. ಇದರಿಂದ ಪಾಕಿಸ್ತಾನಿಯರು ಈಗ ದೇಶ ಮರಳಿ ತವರಿಗೆ ಬಿಟ್ಟು ಹೋಗಲೇಬೇಕಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುತ್ತಿರುವ ಸುಮಾರು 5,000 ಪಾಕಿಸ್ತಾನಿ ಪ್ರಜೆಗಳ ಪಟ್ಟಿಯನ್ನು ಗುಪ್ತಚರ ಇಲಾಖೆ (ಐಬಿ) ದಿಲ್ಲಿ ಪೊಲೀಸರಿಗೆ ಹಸ್ತಾಂತರಿಸಿದೆ.

ದೇಶ ಬಿಡಬೇಕಿದೆ ದಿಲ್ಲಿಯಲ್ಲಿನ 5,000 ಪಾಕಿಸ್ತಾನಿ ಪ್ರಜೆಗಳು

ನವದೆಹಲಿ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ (Pahalgam, terror attack) ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬಳಿಕ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳ (Pakistani Nationals) ವೀಸಾವನ್ನು ರದ್ದುಗೊಳಿಸಿದೆ. ಇದರಿಂದ ಪಾಕಿಸ್ತಾನಿಯರು ಈಗ ದೇಶ ಮರಳಿ ತವರಿಗೆ ಬಿಟ್ಟು ಹೋಗಲೇಬೇಕಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಸಿಸುತ್ತಿರುವ ಸುಮಾರು 5,000 ಪಾಕಿಸ್ತಾನಿ ಪ್ರಜೆಗಳ ಪಟ್ಟಿಯನ್ನು ಗುಪ್ತಚರ ಇಲಾಖೆ ಪೊಲೀಸರಿಗೆ ಹಸ್ತಾಂತರಿಸಿದೆ. ಇವರು ಈಗ ಪಾಕಿಸ್ತಾನಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಅನಂತರ ಕೇಂದ್ರದ ನಿರ್ದೇಶನದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದುಗೊಂಡಿದೆ. ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಪಟ್ಟಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಈಗ ದಿಲ್ಲಿ ಪೊಲೀಸರ ವಿಶೇಷ ಶಾಖೆಯೊಂದಿಗೆ ಹಂಚಿಕೊಂಡಿದೆ. ಹೆಚ್ಚಿನ ಪರಿಶೀಲನೆ ಮತ್ತು ಗುರುತಿಸುವಿಕೆಗಾಗಿ ಸಂಬಂಧಪಟ್ಟ ಜಿಲ್ಲೆಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ.

ಈ ಪಟ್ಟಿಯಲ್ಲಿ ದೀರ್ಘಾವಧಿಯ ವೀಸಾಗಳನ್ನು (LTVs) ಹೊಂದಿರುವ ಮತ್ತು ವಿನಾಯಿತಿ ಪಡೆದ ಹಿಂದೂ ಪಾಕಿಸ್ತಾನಿ ಪ್ರಜೆಗಳ ಹೆಸರುಗಳು ಕೂಡ ಸೇರಿವೆ. ಪಟ್ಟಿಯನ್ನು ಪರಿಶೀಲನೆಗಾಗಿ ಸಂಬಂಧಪಟ್ಟ ಜಿಲ್ಲೆಗೆ ಹಸ್ತಾಂತರಿಸಲಾಗಿದೆ. ಪಾಕ್ ಪ್ರಜೆಗಳು ತಮ್ಮ ತಾಯ್ನಾಡಿಗೆ ಮರಳುವಂತೆ ಆದೇಶ ನೀಡಲಾಗಿದೆ. ಮಧ್ಯ ಮತ್ತು ಈಶಾನ್ಯ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯದ ಕುರಿತು ಸಭೆ ಕರೆಯಲಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಲು ದಿಲ್ಲಿ ಪೊಲೀಸರಿಗೆ ಸೂಚಿಸಲಾಗಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.

ದಿಲ್ಲಿಯಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಅವರನ್ನು ಭಾರತದಿಂದ ಬೇಗನೆ ಹೊರಹೋಗುವಂತೆ ಮಾಡುವ ಜವಾಬ್ದಾರಿಯನ್ನು ದಿಲ್ಲಿ ಪೊಲೀಸ್ ಮತ್ತು ಗುಪ್ತಚರ ಬ್ಯೂರೋದ ವಿಶೇಷ ಶಾಖೆಯ ಅಧಿಕಾರಿಗಳಿಗೆ ವಹಿಸಲಾಗಿದೆ.

ದಿಲ್ಲಿಯಲ್ಲಿ ಸುಮಾರು 5,000 ಪಾಕಿಸ್ತಾನಿ ಪ್ರಜೆಗಳ ಎರಡು ಪಟ್ಟಿಗಳು ತಮ್ಮ ಬಳಿ ಇವೆ. ಕೆಲವರು ಇಲ್ಲಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಇನ್ನು ಅನೇಕರು ಈಗಾಗಲೇ ಹೊರಟು ಹೋಗಿರುವುದರಿಂದ ಅವರಿದ್ದ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಡೋರ್ ಕ್ಲೋಸ್ ಆಗುತ್ತಿದ್ದಂತೆ ಚಲಿಸುತ್ತಿದ್ದ ಟ್ರೈನ್ ಏರಿದ ಮಹಿಳೆ; ಕೊನೆಗೆ ಆಗಿದ್ದೇನು?

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಏಪ್ರಿಲ್ 27ರ ಬಳಿಕ ವೈದ್ಯಕೀಯ, ರಾಜತಾಂತ್ರಿಕ ಮತ್ತು ದೀರ್ಘಾವಧಿಯ ವೀಸಾಗಳನ್ನು ಹೊರತುಪಡಿಸಿ ಉಳಿದ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಲಾಗುತ್ತಿದೆ. ವೈದ್ಯಕೀಯ ವೀಸಾಗಳು ಏಪ್ರಿಲ್ 29ರ ಅನಂತರ ಅಮಾನ್ಯವಾಗಲಿದೆ.

ಹಿಂದೂ ಪಾಕಿಸ್ತಾನಿ ಪ್ರಜೆಗಳಿಗೆ ಈಗಾಗಲೇ ನೀಡಲಾದ ದೀರ್ಘಾವಧಿಯ ವೀಸಾಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.