ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 6 ಮಂದಿ ಸಾವು, 8 ಮಂದಿಗೆ ಗಾಯ

ಆಂಧ್ರಪ್ರದೇಶದ (firecracker factory Tragedy) ಪೂರ್ವ ಗೋದಾವರಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುರಕ್ಷತಾ ಕ್ರಮಗಳ ಕೊರತೆ ಅಥವಾ ರಾಸಾಯನಿಕಗಳ ಅಸಮರ್ಪಕ ನಿರ್ವಹಣೆ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ.

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 6 ಮಂದಿ ಸಾವು

-

Vishakha Bhat Vishakha Bhat Oct 8, 2025 3:29 PM

ಹೈದರಾಬಾದ್‌: ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಮಿಕರು ಪಟಾಕಿಗಳನ್ನು ತಯಾರಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಪಟಾಕಿಯಲ್ಲಿ ಬಳಸುವ ರಾಸಾಯನಿಕಗಳಿಂದಾಗಿ ಬೆಂಕಿ ಮತ್ತಷ್ಟು ಶೀಘ್ರವಾಗಿ ಹರಡಿಕೊಂಡಿದೆ. ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

ರಾಯವರಂ ಮಂಡಲದ ಕೊಮರಿಪಲೆಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದರು, ಆದರೆ ಬೆಂಕಿಯ ತೀವ್ರತೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಿನ ಕೆಲಸವಾಗಿದೆ. ಪೊಲೀಸರು, ಕಂದಾಯ ಅಧಿಕಾರಿಗಳು ಮತ್ತು ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸುರಕ್ಷತಾ ಕ್ರಮಗಳ ಕೊರತೆ ಅಥವಾ ರಾಸಾಯನಿಕಗಳ ಅಸಮರ್ಪಕ ನಿರ್ವಹಣೆ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸಾವುನೋವುಗಳ ಬಗ್ಗೆ ದುಃಖ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ವೈಯಕ್ತಿಕವಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸೂಚಿದ್ದಾರೆ.

ಈ ಸುದ್ದಿಯನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

ಪರಿಹಾರ ಕ್ರಮಗಳು ಮತ್ತು ವೈದ್ಯಕೀಯ ನೆರವಿನ ಬಗ್ಗೆ ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳಕ್ಕೆ ವೈಯಕ್ತಿಕವಾಗಿ ಭೇಟಿ ನೀಡಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ನೀಡುವಂತೆ ನಾನು ಸಲಹೆ ನೀಡಿದ್ದೇನೆ. ಸಂತ್ರಸ್ತ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ" ಎಂದು ಚಂದ್ರಬಾಬು ನಾಯ್ಡು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.