ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Steel plant tragedy: ಉಕ್ಕಿನ ಸ್ಥಾವರದ ಕಟ್ಟಡ ಕುಸಿತ; 6 ಮಂದಿ ಸಾವು, ಹಲವರಿಗೆ ಗಾಯ

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿರುವ ಖಾಸಗಿ ಉಕ್ಕಿನ ಸ್ಥಾವರವೊಂದರಲ್ಲಿ ಶುಕ್ರವಾರ ಕಟ್ಟಡ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ಕಿನ ಸ್ಥಾವರದ ಕಟ್ಟಡ ಕುಸಿತ;  6 ಮಂದಿ ಸಾವು

-

Vishakha Bhat Vishakha Bhat Sep 26, 2025 7:46 PM

ರಾಯ್ಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿರುವ ಖಾಸಗಿ ಉಕ್ಕಿನ ಸ್ಥಾವರವೊಂದರಲ್ಲಿ (Steel plant tragedy) ಶುಕ್ರವಾರ ಕಟ್ಟಡ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್‌ಗಢ ರಾಜಧಾನಿಯ ಹೊರವಲಯದಲ್ಲಿರುವ ಸಿಲ್ತಾರಾ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾವರಿ ಇಸ್ಪಾತ್ ಲಿಮಿಟೆಡ್ ಫ್ಯಾಕ್ಟರಿಲ್ಲಿ ಈ ಘಟನೆ ನಡೆದಿದೆ. ಕಟ್ಟಡ ಕುಸಿತದ ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಐದು ಕಾರ್ಮಿಕರು ಸಾವನ್ನಪ್ಪಿದರು ಮತ್ತು ಐದು ಮಂದಿ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದೋರ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿ, 12 ಮಂದಿಗೆ ಗಾಯವಾಗಿರುವ ಘಟನೆ ಇಂದೋರ್‌ನ ರಾಣಿಪುರ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಫಹೀಮ್​ ಹಾಗೂ ಅಲಿಫಾ ಎಂದು ಗುರುತಿಸಲಾಗಿದೆ. ದೌಲತ್ ಗಂಜ್ ಪ್ರದೇಶದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೆಲಮಾಳಿಗೆ ಸೇರಿದಂತೆ ಮೂರು ಅಂತಸ್ತಿನ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಆರಂಭದಲ್ಲಿ ಅವಶೇಷಗಳಡಿ 13 ಮಂದಿ ಸಿಲುಕಿಕೊಂಡಿರುವುದಾಗಿ ಶಂಕಿಸಲಾಗಿತ್ತು. ಕಾರ್ಯಾಚರಣೆ ಬಳಿಕ 13 ಜನರ ಜೊತೆಗೆ ಇನ್ನೊಂದು ಮಗುವನ್ನು ಕೂಡ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಹೂವುಗಳ ಬೆಲೆ ಕುಸಿತ: ನೆರೆಯ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ರಫ್ತು ಬೇಡಿಕೆ ಕುಸಿತ

ಮಹಾತ್ಮ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅರವಿಂದ್ ಘಂಘೋರಿಯಾ ಅವರು ಮಾತನಾಡಿ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅಲಿಫಾ (20) ಅವರನ್ನು ಮಹಾರಾಜ ಯಶ್ವಂತ್ ರಾವ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಹೇಳಿದ್ದಾರೆ. ಕಟ್ಟಡದ ಮುಂಭಾಗವನ್ನು ಇತ್ತೀಚೆಗೆ ಪುನರ್ನಿರ್ಮಿಸಲಾಗಿತ್ತು, ಆದರೆ, ಹಿಂಭಾಗವು ಹಳೆಯದಾಗಿತ್ತು. ಕಟ್ಟಡದ ಅಡಿಪಾಯದ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿದ್ದಾರೆ.