#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Haryana Horror: ಹರಿಯಾಣದಲ್ಲಿ ಕಾಲುವೆಗೆ ಬಿದ್ದ ವಾಹನ ; 6 ಮಂದಿ ಸಾವು, ಹಲವರು ನಾಪತ್ತೆ

ಹರಿಯಾಣಾದಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಶುಕ್ರವಾರ ತಡರಾತ್ರಿ ಮದುವೆ ಮುಗಿಸಿ ಬರುತ್ತಿದ್ದ ವಾಹನವೊಂದು ಕಾಲುವೆಗೆ ಬಿದ್ದಿದ್ದೆ. ಪರಿಣಾಮ ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದರೆ ಹಲವರು ನಾಪತ್ತೆಯಾಗಿದ್ದಾರೆ.

ಕಾಲುವೆಗೆ ಬಿದ್ದ ವಾಹನ ; 6 ಮಂದಿ ಸಾವು, ಹಲವರು ನಾಪತ್ತೆ

Road accident Haryana

Profile Vishakha Bhat Feb 2, 2025 11:00 AM

ಚಂಡೀಗಢ : ಹರಿಯಾಣದಲ್ಲಿ (Haryana) ಭೀಕರ ಅಪಘಾತವೊಂದು (Road Accident) ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಫತೇಹಾಬಾದ್‌ನಲ್ಲಿ 14 ಜನರನ್ನು ಹೊತ್ತೊಯ್ಯುತ್ತಿದ್ದ ವಾಹನವು ಕಾಲುವೆಗೆ ಉರುಳಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಈ ಬಗ್ಗೆ ಮಾಹಿತಿ ನೀಡಿದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಜಗದೀಶ್ ಚಂದ್ರ, ಪಂಜಾಬ್‌ನ ಫಜಿಲ್ಕಾದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ವಾಹನ ಫತೇಹಾಬಾದ್‌ನಲ್ಲಿ ಕಾಲುವೆಗೆ ಉರುಳಿದೆ. 14 ಜನರಲ್ಲಿ 6 ಮೃತದೇಹಗಳು ಪತ್ತೆಯಾಗಿದ್ದು, 2 ಮಂದಿಗೆ ಗಂಭೀರ ಗಾಯಗಳಾಗಿದ್ದು, ಇನ್ನು 6 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. NDRF ಮತ್ತು SDRF ತಂಡಗಳು ಸದ್ಯ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅವರು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ: Road Accident: ಬಾಗಲಕೋಟೆಯಲ್ಲಿ ಭೀಕರ ಸರಣಿ ಅಪಘಾತ; ಮೂವರ ದುರ್ಮರಣ

ನೀರಾವರಿ ಇಲಾಖೆಯೊಂದಿಗೆ ಮಾತನಾಡಿದ್ದೇನೆ , ಕಾಲುವೆಯ ಸುತ್ತಲೂ ಶಾಶ್ವತ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಯೋಜನೆ ಮಾಡಲಿದ್ದೇವೆ. ಸದ್ಯಕ್ಕೆ ನಾವು ತಾತ್ಕಾಲಿಕ ಸುರಕ್ಷತಾ ಬ್ಯಾರಿಕೇಡ್ ಅನ್ನು ಅಳವಡಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೃತಪಟ್ಟವರಲ್ಲಿ 1.5 ತಿಂಗಳ ಶಿಶು ಮತ್ತು 10 ವರ್ಷದ ಹೆಣ್ಣು ಮಗು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.