ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

ಸ್ಫೋಟದಿಂದಾಗಿ ಕಾರ್ಖಾನೆಯ ಗೋಡೆಗಳು ಕುಸಿದು ಬಿಟ್ಟಿದ್ದು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವಾರು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. "ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ರಕ್ಷಣಾ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯವನ್ನು ಕೈಗೊಳ್ಳುತ್ತಿವೆ" ಎಂದು ಅಧಿಕಾರಿ ಹೇಳಿದರು.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

-

Abhilash BC Abhilash BC Aug 31, 2025 2:23 PM

ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ(firecracker factory) ಸಂಭವಿಸಿದ ಭಾರಿ ಸ್ಫೋಟದಲ್ಲಿ, ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ದುರಂತ ಘಟನೆ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಿಸುವ ಕಾರ್ಯ ನಡೆಸುತ್ತಿದ್ದಾರೆ. ಮೃತರಲ್ಲಿ ಕಾರ್ಖಾನೆ ಮಾಲೀಕ ಆಲಂ ಕೂಡ ಸೇರಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದ ಆಲಂ, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ನಿರ್ದೇಶಿಸಿದರು.

ಸ್ಫೋಟದಿಂದಾಗಿ ಕಾರ್ಖಾನೆಯ ಗೋಡೆಗಳು ಕುಸಿದು ಬಿಟ್ಟಿದ್ದು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವಾರು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. "ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ರಕ್ಷಣಾ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯವನ್ನು ಕೈಗೊಳ್ಳುತ್ತಿವೆ" ಎಂದು ಅಧಿಕಾರಿ ಹೇಳಿದರು.

"ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ" ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕಾರಂ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ Crackers Blast: ಗಣೇಶ ವಿಸರ್ಜನೆ ವೇಳೆ ಅವಘಡ; ಬಾಲಕ ಸಾವು, ಪೊಲೀಸ್ ಸಿಬ್ಬಂದಿ ಸೇರಿ 6 ಜನರಿಗೆ ಗಾಯ