ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: 35 ವರ್ಷದ ಮಹಿಳೆ ಜೊತೆ ಮದುವೆ; ಹನಿಮೂನ್‌ಗೂ ಮೊದಲೇ ಸಾವನ್ನಪ್ಪಿದ 75ರ ವೃದ್ಧ!

75-Year-Old Man Died: 75 ವರ್ಷದ ಸಂಗ್ರರಾಮ್ ಎಂಬ ವ್ಯಕ್ತಿ, ತನ್ನ ಅರ್ಧಕ್ಕಿಂತ ಕಡಿಮೆ ವಯಸ್ಸಿನ ಅಂದರೆ 35 ವರ್ಷದ ಮಹಿಳೆಯನ್ನು ಮದುವೆಯಾಗಿದ್ದ. ಆದರೆ ಮದುವೆಯ ಮಾರನೇ ದಿನ ಬೆಳಗ್ಗೆ ಮೃತಪಟ್ಟಿದ್ದಾನೆ. ಇದೀಗ ಆತನ ಸಾವಿನ ಬಗ್ಗೆ ಹಲವಾರು ಸಂಶಯ ಭುಗಿಲೆದ್ದಿದೆ.

ಜೌನ್‌ಪುರ: ಇಳಿ ವಯಸ್ಸಿನಲ್ಲಿ ಸಂಗಾತಿ ಬೇಕೆಂದು ಮದುವೆಯಾಗಿದ್ದ 75ರ ವೃದ್ಧ ಹಸೆಮಣೆ ಏರಿದ ಬೆನ್ನಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 75 ವರ್ಷದ ಸಂಗ್ರರಾಮ್ ಎಂಬ ವ್ಯಕ್ತಿ, ತನ್ನ ಅರ್ಧಕ್ಕಿಂತ ಕಡಿಮೆ ವಯಸ್ಸಿನ ಅಂದರೆ 35 ವರ್ಷದ ಮಹಿಳೆಯನ್ನು ಮದುವೆಯಾಗಿದ್ದ. ಆದರೆ ಮದುವೆಯ ಮಾರನೇ ದಿನ ಬೆಳಗ್ಗೆ ಮೃತಪಟ್ಟಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral News) ಆಗುತ್ತಿದೆ

ಈ ಘಟನೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ಕುಚ್‌ಮುಚ್ ಗ್ರಾಮದಲ್ಲಿ ನಡೆದಿದೆ. ಆ ವ್ಯಕ್ತಿ ಒಂದು ವರ್ಷದ ಹಿಂದೆ ತನ್ನ ಮೊದಲ ಹೆಂಡತಿಯನ್ನು ಕಳೆದುಕೊಂಡಿದ್ದನು ಮತ್ತು ಅಂದಿನಿಂದ ಒಂಟಿಯಾಗಿ ವಾಸಿಸುತ್ತಿದ್ದನು. ಮಕ್ಕಳಿಲ್ಲದ ಕಾರಣ, ಅವನು ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದ. ಸಂಬಂಧಿಕರ ವಿರೋಧದ ನಡುವೆಯೇ ಇಳಿ ವಯಸ್ಸಿನಲ್ಲಿ ಸಂಗ್ರರಾಮ್‌ ಮರುಮದುವೆಗೆ ಮುಂದಾಗಿದ್ದ. ಅದರಂತೆ ಸೆಪ್ಟೆಂಬರ್ 29, ಸೋಮವಾರ, ಅವನು ಜಲಾಲ್ಪುರ ಪ್ರದೇಶದ ನಿವಾಸಿ 35 ವರ್ಷದ ಮನ್ಭವತಿಯನ್ನು ವಿವಾಹವಾದನು. ಈ ಜೋಡಿ ನ್ಯಾಯಾಲಯದಲ್ಲಿ ವಿವಾಹ ನೋಂದಣಿ ಮಾಡಿಕೊಂಡು ನಂತರ ಸ್ಥಳೀಯ ದೇವಾಲಯದಲ್ಲಿ ಮದುವೆಯಾಗಿದ್ದರು. ಮದುವೆ ಮಾರನೇ ದಿನ ಬೆಳಗ್ಗೆ ಹೊತ್ತಿಗೆ, ಸಂಗ್ರರಾಮ್ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಈ ಸುದ್ದಿಯನ್ನೂ ಓದಿ: Sirsi News: ಉತ್ತರ ಕನ್ನಡ ಜಿಲ್ಲೆಯ ಪತ್ರಕರ್ತರು ಉತ್ತಮವಾಗಿ ನಿಷ್ಢೆಯಿಂದ ಕಾರ್ಯ ಮಾಡುವಂಥವರು

ಹಠಾತ್ ಸಾವು ಗ್ರಾಮದಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ. ಹಲವರು ಸಂಗ್ರರಾಮ್‌ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸಾವಿನ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಯುವವರೆಗೆ ಅಂತ್ಯಕ್ರಿಯೆ ನಡೆಸುವುದಿಲ್ಲವೆಂದು ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಪೊಲೀಸ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು,ಮರುಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.