ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಂಬೈಯ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 75ರ ವೃದ್ಧ ಹೃದಯಾಘಾತದಿಂದ ಸಾವು

CJP Protest: ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 75 ವರ್ಷದ ವೃದ್ಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಅವರು ಸಂಜೆ 4.30ರ ಸುಮಾರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ಆಗಮಿಸಿದ್ದರು. ಸಂಜೆ 5 ಗಂಟೆ ಸುಮಾರಿಗೆ, ಗೇಟ್ ಸಂಖ್ಯೆ 6 ಅನ್ನು ಸಮೀಪಿಸುತ್ತಿದ್ದಾಗ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡರು ಎಂದು ಮೂಲಗಳು ತಿಳಿಸಿವೆ.

ಮುಂಬೈಯಲ್ಲಿ ಸಿಜೆಪಿ ಪ್ರತಿಭಟನೆ

ಮುಂಬೈ, ಅ. 3: ಸಿಜೆಪಿ ಪ್ರತಿಭಟನೆಯಲ್ಲಿ (CJP protest) ಭಾಗವಹಿಸಿದ್ದ 75 ವರ್ಷದ ವೃದ್ಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ. ಗುರುವಾರ (ಅ. 1) ಸಂಜೆ ಶಿವಾಜಿ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ನಂತರ ಥಾಣೆ ನಿವಾಸಿಯಾಗಿರುವ ವೃದ್ಧ ಮೃತಪಟ್ಟರು. ಥಾಣೆಯ ದೋಸ್ತಿ ವೆಸ್ಟ್ ಕೌಂಟಿಯ ನಿವಾಸಿ ಗೋಪಾಲಕೃಷ್ಣ ಸುಬ್ಬಯ್ಯ ಪಿಳ್ಳೈ ಮೃತ ದುರ್ದೈವಿ.

ಪಿಳ್ಳೈ ಸಂಜೆ 4.30ರ ಸುಮಾರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ಆಗಮಿಸಿದ್ದರು. ಸಂಜೆ 5 ಗಂಟೆ ಸುಮಾರಿಗೆ, ಗೇಟ್ ಸಂಖ್ಯೆ 6 ಸಮೀಪಿಸುತ್ತಿದ್ದಾಗ ಪಿಳ್ಳೈ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡರು. ಅವರ ಸ್ನೇಹಿತ ಮತ್ತು ಸ್ಥಳದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಅವರ ಸಹಾಯಕ್ಕೆ ಧಾವಿಸಿದರು. ಪ್ರತಿಭಟನೆ ಸ್ಥಳದಲ್ಲಿದ್ದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಪಿಳ್ಳೈ ಅವರನ್ನು ಶಿವಾಜಿ ಪಾರ್ಕ್‌ನಲ್ಲಿರುವ ಸುಶ್ರುಷ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಯ ಸಮಯದಲ್ಲಿ ಅವರು ನಿಧನರಾದರು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಆಕಸ್ಮಿಕ ಸಾವಿನ ವರದಿ (ಎಡಿಆರ್) ದಾಖಲಾಗಿದ್ದು, ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಪಿಎಸ್‌ಸಿ ಅಕ್ರಮಗಳ ಬಗ್ಗೆ ಸಿಜೆಪಿ ಮೌನ ಏಕೆ?: ಕುಮಾರಸ್ವಾಮಿ ಪ್ರಶ್ನೆ

ಅಕ್ಟೋಬರ್ 10ರಂದು ಮತ್ತೊಂದು ಹೋರಾಟಕ್ಕೆ ಸಿಜೆಪಿ ಸಜ್ಜು

ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಕಾಕ್ರೋಚ್ ಜನತಾ ಪಕ್ಷ ಘೋಷಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಳಿಕ ಇದೀಗ ಮೊತ್ತೊಂದು ಹೋರಾಟಕ್ಕೆ ಸಿಜೆಪಿ ಮುಂದಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಜೆನ್ ಜೀ ಗಳು ಹೋರಾಟಕ್ಕೆ ಇಳಿಯಲಿದೆ. ದೆಹಲಿಯಲ್ಲಿ 'ಜಂತರ್ ಮಂತರ್ 2.0' ನಡೆಯಲಿದೆ ಎಂದು ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.

ಮುಂಬೈಯ ಶಿವಾಜಿ ಪಾರ್ಕ್‌ನಲ್ಲಿ ಸಾವಿರಾರು ಜನರ ಪ್ರತಿಭಟನೆಯ ನೇತೃತ್ವ ವಹಿಸಿದ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು. ಈ ಕುರಿತು ಶುಕ್ರವಾರ (ಅ. 2) ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಅವರು, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಇಲ್ಲವಾದರೆ ದೇಶಾದ್ಯಂತ ಸಿಜೆಪಿ ಬೆಂಬಲಿಗರು ದೆಹಲಿಯಲ್ಲಿ ಮೆರವಣಿಗೆ ಮಾಡಿ ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.