ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಬಾಂಗ್ಲಾ ಪ್ರಜೆಗಳು ದುರ್ಮರಣ

Fire Accident: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ -

Vishakha Bhat Heggar
Vishakha Bhat Heggar Aug 19, 2026 9:00 AM

ಕೊಲ್ಕತ್ತಾ: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ (Fire Accident) ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಕೊಲ್ಕತ್ತಾದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಾಂಗ್ಲಾದೇಶಿ ಪ್ರಜೆಗಳು ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅಗ್ನಿಶಾಮಕ ದಳವರು ಬೆಂಕಿ ಆರಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಪರಿಣಾಮ ಹೋಟೆಲ್‌ನೊಳಗಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಎ.ಸಿ ಸ್ಫೋಟಗೊಂಡ (AC Blast) ಪರಿಣಾಮ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.



ಬೆಂಕಿ ಕಾಣಿಸಿಕೊಂಡ ಕುರಿತು ಮಾಹಿತಿ ಲಭ್ಯವಾದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಜೊತೆಗೆ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಬೆಂಕಿಯಲ್ಲಿ ಸಾವನ್ನಪ್ಪಿದ ಎಲ್ಲಾ ಒಂಬತ್ತು ಜನರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದರು ಎಂದು ವರದಿಯಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!

ಸದ್ಯ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕ್ಷಣಾರ್ಧದಲ್ಲಿ ಇಡೀ ಕಟ್ಟಡ ಹೊತ್ತಿ ಉರಿದಿದೆ. ದಟ್ಟವಾದ ಹೊಗೆಯಿಂದಾಗಿ ಅಗ್ನಿಶಾಮಕ ದಳದವರಿಗೆ ಮೆಟ್ಟಿಲು ಹತ್ತಿ ಮೇಲಿನ ಮಹಡಿಗಳನ್ನು ತಲುಪಲು ಕಷ್ಟವಾಯಿತು. ಒಂಬತ್ತು ಜನರು ಸಾವನ್ನಪ್ಪಿದ್ದರೂ, ಹೆಚ್ಚಿನ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.