ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ʼಲೆಹ್ರಾ ದೋ ತಿರಂಗಾʼ ಪ್ರತಿಭಟನಾ ಮೆರವಣಿಗೆಗೆ ಮುನ್ನವೇ ದೆಹಲಿ ಪೊಲೀಸರಿಂದ ಅಭಿಜಿತ್‌ ದೀಪ್ಕೆ ಬಂಧನ

Abhijeet Dipke: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೆಹ್ರಾ ದೋ ತಿರಂಗಾ' ಪ್ರತಿಭಟನಾ ಮೆರವಣಿಗೆಗೆ ಮುನ್ನ, ಕಾಕ್ರಾಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ದೆಹಲಿ ಪೊಲೀಸರಿಂದ ಅಭಿಜಿತ್‌ ದೀಪ್ಕೆ ಬಂಧನ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 16, 2026 5:53 PM

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೆಹ್ರಾ ದೋ ತಿರಂಗಾ' ಪ್ರತಿಭಟನಾ ಮೆರವಣಿಗೆಗೆ ಮುನ್ನ, ಕಾಕ್ರಾಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ (Abhijeet Dipke) ಅವರನ್ನು ದೆಹಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ರಾಜಧಾನಿಯ ಕನ್ನಾಟ್ ಪ್ಲೇಸ್ ಮತ್ತು ಲ್ಯುಟ್ಯೆನ್ಸ್ ದೆಹಲಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಕನ್ನಾಟ್ ಪ್ಲೇಸ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕೇಂದ್ರ ದೆಹಲಿಯಾದ್ಯಂತ ಸುಮಾರು 26,000 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಗಳು, 6,000 ಕ್ಕೂ ಹೆಚ್ಚು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಯಾಕೆ ಈ ಪ್ರತಿಭಟನೆ?

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇತ್ತೀಚೆಗೆ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ಬಂಧನವನ್ನು ವಿರೋಧಿಸಿ ಈ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಅಕ್ಟೋಬರ್ 16 ರಂದು ಸಂಜೆ 5 ಗಂಟೆಗೆ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ಶಾಂತಿಯುತ ಮೆರವಣಿಗೆ ನಡೆಸಲು ಸಿಜೆಪಿ ನಾಯಕರು ಯೋಜಿಸಿದ್ದರು.

ನನ್ನನ್ನು ಬಂಧಿಸಿದರೂ ಹೆದರಲ್ಲ, ರಾಷ್ಟ್ರಧ್ವಜ ಹಾರಿಸಿಯೇ ತೀರುತ್ತೇವೆ: ಅಭಿಜೀತ್ ದೀಪ್ಕೆ

ತಮ್ಮ ಬಂಧನಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ, "ದೇಶದಲ್ಲಿ ರಾಷ್ಟ್ರಧ್ವಜ ಹಾರಿಸುವುದು ಅಪರಾಧವಲ್ಲ. ನಮ್ಮ ಸಹೋದ್ಯೋಗಿಗಳ ಹಕ್ಕಿಗಾಗಿ ಮತ್ತು ದೇಶದ ಗೌರವಕ್ಕಾಗಿ ನಾನು ಜೈಲಿಗೆ ಹೋಗಲು ಸಿದ್ಧನಿದ್ದೇನೆ" ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.