ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಭಿಷೇಕ್ ರಕ್ತ ಹೆಪ್ಪುಗಟ್ಟಿದೆ, ಕೊಲೆ ಮಾಡಲು ಬಿಜೆಪಿ ಸಂಚು ರೂಪಿಸಿದೆ; ಮಮತಾ ವಾಗ್ದಾಳಿ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ್ ಪ್ರದೇಶದಲ್ಲಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಬ್ಯಾನರ್ಜಿ ಅವರು ಚುನಾವಣೋತ್ತರ ಹಿಂಸಾಚಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸಂಗ್ರಹ ಚಿತ್ರ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ್ ಪ್ರದೇಶದಲ್ಲಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ( Abhishek Banerjee) ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಬ್ಯಾನರ್ಜಿ ಅವರು ಚುನಾವಣೋತ್ತರ (Mamata Banerjee) ಹಿಂಸಾಚಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಚುನಾವಣೋತ್ತರ ಹಿಂಸಾಚಾರದಿಂದ ಬಾಧಿತ ಕುಟುಂಬಗಳನ್ನು ಭೇಟಿ ಮಾಡಲು ಬ್ಯಾನರ್ಜಿ ಸೋನಾರ್ಪುರ್‌ಗೆ ತೆರಳಿದ್ದರು. ಈ ವೇಳೆ ಗುರುತಿಸಲಾಗದ ಕೆಲವರು ಅವರ ವಿರುದ್ಧ ಪ್ರತಿಭಟನೆ ನಡೆಸಿ, ಕಲ್ಲು, ಮೊಟ್ಟೆ ಹಾಗೂ ಚಪ್ಪಲಿಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಸೋನಾರ್ಪುರದಲ್ಲಿ ನಡೆದ ದಾಳಿಯ ನಂತರ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವೈದ್ಯಕೀಯ ಸ್ಥಿತಿ ಗಂಭೀರವಾಗಿದ್ದರೂ, ಅವರನ್ನು ಡಿಸ್ಚಾರ್ಜ್ ಮಾಡುವಂತೆ ಬಿಜೆಪಿ ನಾಯಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆಸ್ಪತ್ರೆಯ ಮೇಲೆ ಒತ್ತಡ ಹೇರಿದ್ದಾರೆ ಎಂದು ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ, ಅಭಿಷೇಕ್ ಬ್ಯಾನರ್ಜಿ ಅವರ ಸ್ಥಿತಿಯ ಬಗ್ಗೆ ದುಃಖ ವ್ಯಕ್ತಪಡಿಸಿದರು ಮತ್ತು ದಾಳಿಯ ನಂತರ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ಹೇಳಿಕೊಂಡರು. ಅವರನ್ನು ತೀವ್ರ ಚಿಕಿತ್ಸಾ ಘಟಕಕ್ಕೆ (ITU) ದಾಖಲಿಸಲಾಗಿದೆ ಮತ್ತು 3D CT ಸ್ಕ್ಯಾನ್, ಅಲ್ಟ್ರಾಸೊನೋಗ್ರಫಿ (USG) ಮತ್ತು ಎದೆಗೂಡಿನ ಪರೀಕ್ಷೆಗಳು ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರು ಮಾಜಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧ "ಕಳ್ಳರು" ಎಂದು ಘೋಷಣೆಗಳನ್ನು ಕೂಗಿದರೆಂದು ವರದಿಯಾಗಿದೆ.

ಪಶ್ಚಿಮ ಬಂಗಾಳ ಚುನಾವಣೆಯ ಹೀನಾಯ ಸೋಲಿನ ಬಳಿಕ ಬದಲಾದ ಮಮತಾ ಬ್ಯಾನರ್ಜಿ ಸ್ಟ್ರಾಟಜಿ; ಬಹುದೊಡ್ಡ ರಾಜಕೀಯ ನಿರ್ಧಾರ ತೆಗೆದುಕೊಂಡ ದೀದಿಯ ಮುಂದಿನ ನಡೆಯ ಬಗ್ಗೆ ಕುತೂಹಲ

ಪ್ರತ್ಯಕ್ಷದರ್ಶಿಗಳ ಹೇಳಿಕೆಯಂತೆ, ಪರಿಸ್ಥಿತಿ ಕೆಲವೇ ಕ್ಷಣಗಳಲ್ಲಿ ಉದ್ವಿಗ್ನಗೊಂಡಿದ್ದು, ಕೆಲವರು ಅಭಿಷೇಕ್ ಬ್ಯಾನರ್ಜಿ ಅವರನ್ನು ತಳ್ಳಾಡಿ, ಹೊಡೆದು, ಒದೆಯಲು ಪ್ರಯತ್ನಿಸಿದರು ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಹಾಗೂ ಪಕ್ಷದ ಕಾರ್ಯಕರ್ತರು ಮಧ್ಯಪ್ರವೇಶಿಸಿ ಅವರನ್ನು ಸ್ಥಳದಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಯಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಲು ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishakha Bhat Heggar

View all posts by this author