ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ (Operation Sindoor) ಮತ್ತೊಮ್ಮೆ ಭಯೋತ್ಪಾದನೆಯನ್ನು ವೈಭವೀಕರಿಸಿದ್ದಕ್ಕಾಗಿ ಭಾರತ ತರಾಟೆಗೆ ತೆಗೆದುಕೊಂಡಿದೆ. ಕಾಶ್ಮೀರ ಮತ್ತು ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಹೇಳಿಕೆಗಳಿಗೆ ಭಾರತ ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ . ಇಸ್ಲಾಮಾಬಾದ್ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ ಮತ್ತು "ಅಸಂಬದ್ಧ ನಾಟಕ"ದಲ್ಲಿ ತೊಡಗಿದೆ ಎಂದು ಆರೋಪಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತನ್ನ ಪ್ರತ್ಯುತ್ತರ ನೀಡುವ ಹಕ್ಕನ್ನು ಚಲಾಯಿಸುವಾಗ, ಭಾರತೀಯ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗೆಹ್ಲೋಟ್, ಭಯೋತ್ಪಾದನೆ "ಅವರ (ಪಾಕಿಸ್ತಾನದ) ವಿದೇಶಾಂಗ ನೀತಿಯ ಕೇಂದ್ರಬಿಂದುವಾಗಿದೆ" ಎಂದು ಹೇಳಿದರು.
ಶುಕ್ರವಾರ ನಡೆದ 80ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಮಾತನಾಡಿದ್ದ ಷರೀಫ್, ಈ ವರ್ಷದ ಆರಂಭದಲ್ಲಿ ತಮ್ಮ ದೇಶದ ಮೇಲೆ ಭಾರತ ಅಪ್ರಚೋದಿತ ಆಕ್ರಮಣ ಮಾಡಿದೆ ಎಂದು ಆಪರೇಷನ್ ಸಿಂದೂರದ ವಿರುದ್ಧ ಮಾತನಾಡಿದ್ದರು. ಪಾಕಿಸ್ತಾನದ ಸಶಸ್ತ್ರ ಪಡೆಗಳು "ಅದ್ಭುತ ವೃತ್ತಿಪರತೆ, ಧೈರ್ಯದಿಂದ ಈ ದಾಳಿಯನ್ನು ಹಿಮ್ಮೆಟ್ಟಿಸಿದೆ ಎಂದು ಹೊಗಳಿಕೊಂಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಗಹ್ಲೋಟ್, ಏಪ್ರಿಲ್ 22 ರ ಹಲ್ಗಾಮ್ ಭಯೋತ್ಪಾದಕ ದಾಳಿಗೆ ಕಾರಣವಾದ ಭಯೋತ್ಪಾದಕ ಸಂಘಟನೆ 'ದಿ ರೆಸಿಸ್ಟೆನ್ಸ್ ಫ್ರಂಟ್' ಅನ್ನು ರಕ್ಷಿಸಿದ್ದಕ್ಕಾಗಿ ಮತ್ತು ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಆಶ್ರಯ ನೀಡಿದಕ್ಕಾಗಿ ಪಾಕಿಸ್ತಾನಕ್ಕೆ ಛೀಮಾರಿ ಹಾಕಿದರು. ಯಾವುದೇ ಮಟ್ಟದ ನಾಟಕ ಅಥವಾ ಯಾವುದೇ ಮಟ್ಟದ ಸುಳ್ಳು ಸತ್ಯಗಳನ್ನು ಮರೆಮಾಚಲು ಸಾಧ್ಯವಿಲ್ಲ. ಏಪ್ರಿಲ್ 25, 2025 ರಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆಯಾದ 'ದಿ ರೆಸಿಸ್ಟೆನ್ಸ್ ಫ್ರಂಟ್' ಅನ್ನು ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಬರ್ಬರ ಹತ್ಯಾಕಾಂಡವನ್ನು ನಡೆಸುವ ಜವಾಬ್ದಾರಿಯಿಂದ ರಕ್ಷಿಸಿದ್ದು ಇದೇ ಪಾಕಿಸ್ತಾನ ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: Operation Sindoor: ಆಪರೇಷನ್ ಸಿಂದೂರ್‌ನಲ್ಲಿ ಮಸೂದ್ ಅಜರ್ ಕುಟುಂಬ ನಾಶ; ಕೊನೆಗೂ ಬಾಯ್ಬಿಟ್ಟ ಉಗ್ರ
"ನಾವು ಯುದ್ಧವನ್ನು ಗೆದ್ದಿದ್ದೇವೆ ಮತ್ತು ಈಗ ನಾವು ನಮ್ಮ ಭಾಗದಲ್ಲಿ ಶಾಂತಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ" ಎಂಬ ಷರೀಫ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೇ 10 ರಂದು ಪಾಕಿಸ್ತಾನದ ಸೇನೆಯು "ಹೋರಾಟವನ್ನು ನಿಲ್ಲಿಸುವಂತೆ ನೇರವಾಗಿ ನಮಗೆ ಬೇಡಿಕೊಂಡಿತು. ಪಾಕಿಸ್ತಾನದ ರನ್‌ವೇಗಳು ಮತ್ತು ಹ್ಯಾಂಗರ್‌ಗಳಲ್ಲಿನ ಹಾನಿಯ ಚಿತ್ರಗಳು ಪುರಾವೆಯಾಗಿ ಲಭ್ಯವಿದೆ ಎಂದು ಅವರು ಹೇಳಿದರು. ಪ್ರಧಾನಿ ಹೇಳಿಕೊಂಡಂತೆ, ನಾಶವಾದ ರನ್‌ವೇಗಳು ಮತ್ತು ಸುಟ್ಟುಹೋದ ಹ್ಯಾಂಗರ್‌ಗಳು ವಿಜಯದಂತೆ ಕಂಡುಬಂದರೆ, ಪಾಕಿಸ್ತಾನವು ಅದನ್ನು ಆನಂದಿಸಲು ಸ್ವಾಗತ ಎಂದು ಅವರು ವ್ಯಂಗ್ಯವಾಡಿದರು.