ಹೈದರಾಬಾದ್, ಮೇ 5: ನಟ ಪ್ರಭಾಸ್ (Prabhas) ʼದಿ ರಾಜಾ ಸಾಬ್' ಸಿನಿಮಾ ಫ್ಲಾಪ್ ಆದ ನಂತರ ‘ಫೌಜಿ' (Prabhas Fauji Movie) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಹನು ರಾಘವಪುಡಿ ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಆದರೆ ಸಿನಿಮಾದ ಆಗಮನಕ್ಕಾಗಿ ಕಾಯುತ್ತಿರುವಾಗಲೇ ಭೀಕರ ದುರಂತವೊಂದು ಸಂಭವಿಸಿದೆ. ಚಿತ್ರತಂಡದ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವು ಹೈದರಾಬಾದ್ ಹೊರವಲಯದಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಓರ್ವ ಸದಸ್ಯ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಅಬ್ದುಲ್ಲಾಪುರ್ಮೆಟ್ ಬಳಿ ಈ ಅಪಘಾತ ಸಂಭವಿಸಿದ್ದು, ಸಿಬ್ಬಂದಿ ಸದಸ್ಯರನ್ನು ಕರೆದೊಯ್ಯುತ್ತಿದ್ದ ವಾಹನವು ಶೂಟಿಂಗ್ ಸ್ಥಳಕ್ಕೆ ಹೋಗುತ್ತಿದ್ದಾಗ ಗಂಭೀರ ಅಪಘಾತಕ್ಕೀಡಾಗಿದೆ. ನಿರ್ಮಾಣ ಸಂಘಕ್ಕೆ ಸಂಬಂಧಿಸಿದ ಓರ್ವ ಸದಸ್ಯ ಅಪಘಾತ ನಡೆದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಲ್ಲದೆ, ಇತರ ಐದು ಮಂದಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತದ ದೃಶ್ಯ:
ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಕೆಲಸಕ್ಕಾಗಿ ಪ್ರೊಡಕ್ಷನ್ ವಾಹನವು ಶೂಟಿಂಗ್ ಸ್ಥಳಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಇದೀಗ ಈ ಆಪಘಾತ ಚಿತ್ರದ ನಿರ್ಮಾಣದ ಮೇಲೆ ಕಪ್ಪು ಚುಕ್ಕೆ ಇಟ್ಟಂತಾಗಿದೆ.
ಸಾಯಿ ಪಲ್ಲವಿ ಅಭಿನಯ ಕಂಡು ಭಾವುಕರಾಗಿ ಕಣ್ಣೀರಿಟ್ಟ ಆಮಿರ್ ಖಾನ್
ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ಇನ್ನೂ ಮಾಹಿತಿ ಬಿಡುಗಡೆ ಮಾಡಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ಮಾಹಿತಿ ಬರಬೇಕಷ್ಟೆ. ಚಿತ್ರದಲ್ಲಿ ಪ್ರಭಾಸ್ ಸೈನಿಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಇಮಾನ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಮತ್ತು ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.