Murder Case: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿ ನೇಣಿಗೆ ಶರಣಾದ ಆರೋಪಿ
ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ನಡೆದಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.


ಬೆಂಗಳೂರು: ನಗರದಲ್ಲಿ ಭೀಕರ ಕೊಲೆ ನಡೆದಿದ್ದು, ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ (Murder Case) ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಂದಿರ ಮಂಡಲ್ (27) ಹಾಗೂ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವವನ್ನು ಸುಮನ್ (28) ಮಂಡಲ್ ಎಂದು ಗುರುತಿಸಲಾಗಿದೆ. ಕಳೆದ 8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಹಿಳೆ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಮಗನಿದ್ದಾನೆ
ಕಳೆದ ಎರಡು ವರ್ಷಗಳಿಂದ ದಂಪತಿಯ ಮಧ್ಯೆ ಕಲಹ ನಡೆಯುತ್ತಿತ್ತು. ಹಾಗಾಗಿ ಇಬ್ಬರೂ ಬೇರ್ಪಟ್ಟಿದ್ದರು. ಮಂದಿರ ಗಂಡನ ಮನೆ ತೊರೆದು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು ಆರೋಪಿ ಸುಮನ್ ಮಂಡಲ್ ಕೊಲೆಯಾದ ಮಹಿಳೆ ಪತಿಯ ಸ್ನೇಹಿತನಾಗಿದ್ದ. ಸುಮನ್ ಹಾಗೂ ಮಂದಿರ ಇಬ್ಬರಿಗೂ ಸ್ನೇಹವಿತ್ತು ಎಂದು ಹೇಳಲಾಗಿದೆ. ಮೊನ್ನೆ ಇಬರ ನಡುವೆ ಗಲಾಟೆಯಾಗಿದೆ. ಸುಮನ್ ಚಾಕುವಿನಿಂದ ಮಂದಿರಾಳ ಕತ್ತನ್ನು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಸುಮನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ: Neha Hiremath murder case: ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್‌ಗೆ ಜಾಮೀನು ಇಲ್ಲ
ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಬಲಿ
ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಸಿಂಚನಹಳ್ಳಿಯ ಸುಶ್ಮಿತಾ (23) ಎನ್ನುವ ಗರ್ಭಿಣಿ ವೈದ್ಯರ ನಿರ್ಲಕ್ಷಕ್ಕೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ಸುಶ್ಮಿತಾ ಕಠಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡು ಹೋಗಿದ್ದರು. ಆಗ ನಾಳೆ ಹೆರಿಗೆ ಮಾಡಿಸುತ್ತೇವೆ ಎಂದು ವೈದ್ಯರು ಹೇಳಿದ್ದರು. ಇಂದು ಬೆಳಗ್ಗೆ ಹೆರಿಗೆಗೆ ಎಂದು ಆಸ್ಪತ್ರೆಗೆ ತೆರಳಿದ್ದಾಗ ಏಕಾಏಕಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಲಾಯಿತು.