ಬೆಂಗಳೂರು: ನವದೆಹಲಿ ಭೆಟಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಆಮೀರ್ ಖಾನ್ (Actor Aamir Khan) ಅವರನ್ನು ಭೇಟಿಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ (Rashtrapathi Bhavan) ತೆರಳಿದ ಸಂದರ್ಭದಲ್ಲಿ ನಟ-ನಿರ್ದೇಶಕ ಆಮೀರ್ ಖಾನ್ ಅವರ ಮುಖಾಮುಖಿಯಾಯಿತು. ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆಮೀರ್ ಖಾನ್ ಅವರ ನೂತನ ಸಿನಿಮಾ ʼಸಿತಾರೇ ಜಮೀನ್ ಪರ್ʼ ಕುರಿತು ಸಿಎಂ ವಿಚಾರಿಸಿಕೊಂಡು, ಅದಕ್ಕೆ ಶುಭ ಹಾರೈಸಿದರು. ಈ ಸಿನಿಮಾ ಕಲಿಕೆಯ ನ್ಯೂನತೆಗಳಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಇದೆ. ಸಿನಿಮಾ ನೋಡುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಲು ಆಮೀರ್ ಖಾನ್ ಬಂದಿದ್ದರು ಎನ್ನಲಾಗಿದೆ.
ದೆಹಲಿ ಭೇಟಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಬಾಕಿ ಉಳಿದಿರುವ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಾಧ್ಯವಾದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೂಡ ಸಿಎಂ ಭೇಟಿ ಮಾಡಲಿದ್ದಾರೆ.
ಇದನ್ನೂ ಓದಿ: Kodi Mutt Swamiji: ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ