ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಂಗಾಳದಲ್ಲಿ ಸರ್ಕಾರ ರಚಿಸಲು ಬಿಜೆಪಿ ಸಜ್ಜು; ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

ಪಶ್ಚಿಮ ಬಂಗಾಳದ ಚುನಾವಣೆಯ ಫಲಿತಾಂಶ ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಒಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. 200 ಕ್ಕೂ ಅಧಿಕ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಂಗಾಳದಲ್ಲಿ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ ಸಜ್ಜಾಗಿದೆ.

ಬಂಗಾಳದಲ್ಲಿ ಸರ್ಕಾರ ರಚಿಸಲು ಬಿಜೆಪಿ ಸಜ್ಜು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 5, 2026 7:37 AM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣೆಯ ಫಲಿತಾಂಶ (West Bengal Election 2026) ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಒಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. 200 ಕ್ಕೂ ಅಧಿಕ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಂಗಾಳದಲ್ಲಿ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ ಸಜ್ಜಾಗಿದೆ. ಇದೀಗ ಬಂಗಾಳದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದ್ದು, ಹಲವು ದಿಗ್ಗಜರ ಹೆಸರು ಕೇಳಿ ಬರುತ್ತದೆ.

ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಎದುರು ಈ ಬಾರಿ ಸೋಲನ್ನು ಕಂಡಿದ್ದಾರೆ. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಇದೀಗ ಬಿಜೆಪಿ ಸಿದ್ದವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಸ್ಥಾನ ಮಾನ ನೀಡಬಹುದು ಎಂದು ಹೇಳಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಪ್ರಚಾರದ ಸಮಯದಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳದವರನ್ನೇ ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತೇವೆ ಎಂದು ಒತ್ತಿ ಒತ್ತಿ ಹೇಳಿದ್ದರು.

ಪ್ರಚಾರದ ಸಮಯದಲ್ಲಿಯೂ ಬಂಗಾಳದ ಮಹಿಳೆಯರ ಸುರಕ್ಷತೆಯ ಕುರಿತು ಬಿಜಿಪಿ ಪ್ರಣಾಳಿಕೆ ಹೊರಡಿಸಿತ್ತು. ಈ ಬಾರಿ ವಿಶೇಷವಾಗಿ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಪಕ್‌ ಸಫಲವಾಗಿದೆ. ಹೀಗಾಗಿ ಬಂಗಾಳದಲ್ಲಿ ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸದ್ಯ ದೆಹಲಿಯಲ್ಲಿ ರೇಖಾ ಗುಪ್ತ ಮಾತ್ರ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಈ ಪಟ್ಟಿಗೆ ಇದೀಗ ಪಶ್ಚಿಮ ಬಂಗಾಳ ಸೇರುವ ಸಾಧ್ಯತೆ ಇದೆ.

ಅಗ್ನಿಮಿತ್ರ ಪಾಲ್ ಮತ್ತು ರೂಪಾ ಗಂಗೂಲಿ

ಇನ್ನು ಬಂಗಾಳದ ಪ್ರಮುಖ ಬಿಜೆಪಿ ನಾಯಕಿಯರನ್ನು ನೋಡುವುದಾದರೆ ಅಗ್ನಿಮಿತ್ರ ಪಾಲ್ ಮತ್ತು ರೂಪಾ ಗಂಗೂಲಿ ಮುಂಚೂಣಿಯಲ್ಲಿದ್ದಾರೆ. ರೂಪಾ ಗಂಗೂಲಿ ಮಹಾಭಾರತದ ದ್ರೌಪದಿ ಪಾತ್ರದಲ್ಲಿ ಇಡೀ ದೇಶಕ್ಕೆ ಚಿರಪರಿಚಿತರು. ಅವರು ರಾಜ್ಯಸಭಾ ಸಂಸದೆಯೂ ಆಗಿದ್ದಾರೆ. ಸೋನಾರ್ಪುರ್ ದಕ್ಷಿಣ ಶಾಸಕಿಯಾಗಿದ್ದರೆ, ಬಂಗಾಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಎರಡು ವರ್ಷ ಸೇವೆ ಸಲ್ಲಿಸಿದ್ದರಿಂದ ತಳಮಟ್ಟದ ಸಂಪರ್ಕವನ್ನು ಹೊಂದಿದ್ದಾರೆ.

ಫ್ಯಾಷನ್ ಡಿಸೈನರ್ ಆಗಿರುವ ಅಗ್ನಿಮಿತ್ರ ಪಾಲ್, ಬಂಗಾಳದ ಬಿಜೆಪಿಯ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ಬಿಜೆಪಿ ಮಹಿಳಾ ಮೋರ್ಚಾದ ಬಂಗಾಳ ಘಟಕದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲಿ ಪಾಲ್‌ ಅವರಿಗೆ ಸಂಪರ್ಕ ಹೆಚ್ಚಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಮೇಲೆ ಕಟುವಾಗಿ ಟೀಕೆ ಮಾಡುವ ಮೂಲಕವೇ ಮತ್ತಷ್ಟು ಫೇಮಸ್‌ ಆಗಿದ್ದರು.

ಸುವೇಂದು ಅಧಿಕಾರಿ

ಟಿಎಂಸಿಯ ಮಾಜಿ ನಾಯಕ ಹಾಗೂ ಮಮತಾ ಅವರ ಆಪ್ತ ಸಹಾಯಕನಾಗಿದ್ದ ಸುವೇಂದು ಅಧಿಕಾರಿ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದವರಲ್ಲಿ ಪ್ರಮುಖರು. , ಸುವೇಂದು ಅವರು ತಳಮಟ್ಟದ ಸಂಪರ್ಕ ಹೊಂದಿದ್ದು, ಈ ಬಾರಿ ಮಮತಾ ಭದ್ರಕೋಟೆ ಎನಿಸಿಕೊಂಡಿದ್ದ ಭವಾನಿಪುರದಲ್ಲಿಯೇ ಅವರಿಗೆ ಸೋಲುಣಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸುವೇಂದು 2021 ರಲ್ಲಿ ಲಂಚ ಪ್ರಕರಣವೊಂದರದಲ್ಲಿ ಸಿಲುಕಿದ್ದರು. ಹೀಗಾಗಿ ಬಿಜೆಪಿ ಇವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವುದು ಕೊಂಚ ಅನುಮಾನ ಎನ್ನಲಾಗುತ್ತಿದೆ.

"ಲೂಟಿ, ಲೂಟಿ, ಲೂಟಿ. ನಾವು ಮತ್ತೆ ಪುಟಿದೇಳುತ್ತೇವೆ": ಬಂಗಾಳದ ಆಘಾತಕಾರಿ ಸೋಲಿಗೆ ಮಮತಾ ಬ್ಯಾನರ್ಜಿ ಹತಾಶೆ

ಸಮಿಕ್ ಭಟ್ಟಾಚಾರ್ಯ

ಬಂಗಾಳ ಬಿಜೆಪಿ ಮುಖ್ಯಸ್ಥರಾದ ಸಮಿಕ್ ಭಟ್ಟಾಚಾರ್ಯ ಆರ್‌ಎಸ್‌ಎಸ್‌ ಮೂಲದವರು. ಪಕ್ಷದೊಳಗೆ ಒಮ್ಮತ ಮೂಡಿಸುವ ವ್ಯಕ್ತಿ ಎಂದು ಇವರನ್ನು ಪರಿಗಣಿಸಲಾಗುತ್ತದೆ. ತೆರೆಮರೆಯಲ್ಲಿ ಕೆಲಸ ಮಾಡಲು ಹೆಸರುವಾಸಿಯಾಗಿರುವ ಭಟ್ಟಾಚಾರ್ಯ, ಸಾಮಾಜಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ತಳದಿಂದ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿಕೊಂಡವರಲ್ಲಿ ಒಬ್ಬರು.