ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿಜೆಪಿ ಆಯ್ತು ಈಗ ಮಾಜಿ ಪೊಲೀಸರ ಸರದಿ: ಮತ್ತೊಂದು ಹೋರಾಟಕ್ಕೆ ಸಾಕ್ಷಿಯಾಗಲಿದೆ ದೆಹಲಿಯ ಜಂತರ್‌ ಮಂತರ್‌; ತಮ್ಮ ಮೇಲಿನ ಹಲ್ಲೆ ಖಂಡಿಸಿ ಮಾಜಿ ಖಾಕಿ ಪಡೆಯಿಂದ ಪ್ರತಿಭಟನೆ

ಕಾಕ್ರೋಚ್ ಜನತಾ ಪಕ್ಷದಿಂದ ಇತ್ತೀಚೆಗೆ ನಡೆದ ದೊಡ್ಡ ಮಟ್ಟದ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ದೆಹಲಿಯ ಜಂತರ್ ಮಂತರ್‌ ಈಗ ಮತ್ತೊಂದು ಪ್ರತಿಭಟನೆಗೆ ಕೇಂದ್ರವಾಗಲಿದೆ. ಇಲ್ಲಿ ಪ್ರತಿಭಟನೆ ನಡೆಸಲು ದೆಹಲಿಯ ಮಾಜಿ ಪೊಲೀಸರು ಅನುಮತಿ ಕೋರಿ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರಿಗೆ ದೆಹಲಿ ಪೊಲೀಸ್ ಫೆಡರೇಶನ್ ವತಿಯಿಂದ ಪತ್ರ ಬರೆಯಲಾಗಿದೆ.

ಸಂಗ್ರಹ ಚಿತ್ರ

ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (Cockroach Janata Party) ಪ್ರತಿಭಟನೆಯ (CJP Protest) ಬಳಿಕ ದೆಹಲಿಯ ಜಂತರ್ ಮಂತರ್ (delhi Jantar Mantar) ಮತ್ತೊಂದು ಪ್ರತಿಭಟನೆಗೆ ಸಾಕ್ಷಿಯಾಗಲಿದೆ. ನಿವೃತ್ತ ಪೊಲೀಸರು (Retired Delhi Police Officers) ಇಲ್ಲಿ ಧರಣಿ ಕುಳಿತುಕೊಳ್ಳಲಿದ್ದಾರೆ. ಇತ್ತೀಚೆಗೆ ನಡೆದ ಸಿಜೆಪಿ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ದೆಹಲಿಯ ಮಾಜಿ ಪೊಲೀಸರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಅನುಮತಿ ಕೋರಿ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ (Police Commissioner Anurag Kumar) ಅವರಿಗೆ ದೆಹಲಿ ಪೊಲೀಸ್ ಫೆಡರೇಶನ್ ವತಿಯಿಂದ ಪತ್ರ ಬರೆಯಲಾಗಿದೆ.

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಜುಲೈ 20 ರಂದು ನಡೆದ ಸಂಸತ್ ಚಲೋ ಅಭಿಯಾನದ ವೇಳೆ ಪ್ರತಿಭಟನಾಕಾರರ ನಡುವೆ ನುಗ್ಗಿದ ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಜನಸಮೂಹವನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಇದರಿಂದಾಗಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಘರ್ಷಣೆಯಲ್ಲಿ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ದೂರಿದ್ದಾರೆ.

ʼʼಕೇಂದ್ರ ಸರ್ಕಾರ ಮಾತ್ರವಲ್ಲ ನಿಮ್ಮನ್ನೂ ವಿರೋಧಿಸುತ್ತೇವೆʼʼ: ರಾಹುಲ್ ಗಾಂಧಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸಿಜೆಪಿ

ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಿವೃತ್ತ ಅಧಿಕಾರಿಗಳ ಸಂಘಟನೆಯಾದ ದೆಹಲಿ ಪೊಲೀಸ್ ಫೆಡರೇಶನ್ ಜುಲೈ 31 ರಂದು ಜಂತರ್ ಮಂತರ್‌ನಲ್ಲಿ ಒಂದು ದಿನದ ಪ್ರತಿಭಟನೆಗೆ ಅನುಮತಿ ಕೋರಿ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರಿಗೆ ದೆಹಲಿ ಪೊಲೀಸ್ ಫೆಡರೇಶನ್ ವತಿಯಿಂದ ಪತ್ರ ಬರೆಯಲಾಗಿದೆ.

ಜುಲೈ 20 ರಂದು ಜಂತರ್ ಮಂತರ್ ಮತ್ತು ಸುತ್ತಮುತ್ತ ತಮ್ಮ ಕಾನೂನುಬದ್ಧ ಕರ್ತವ್ಯಗಳನ್ನು ನಿರ್ವಹಿಸುವಾಗ ಹೆಚ್ಚಿನ ಸಂಖ್ಯೆಯ ಪೊಲೀಸ್ ಮತ್ತು ಅರೆಸೈನಿಕ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ. ಇದನ್ನು ಖಂಡಿಸಿ ಪೊಲೀಸ್ ಪಡೆ ತನ್ನ ಒಗ್ಗಟ್ಟನ್ನು ಪ್ರದರ್ಶಿಸಲು ಜುಲೈ 31 ರಂದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ ಧರಣಿ ನಡೆಸಲು ಅನುಮತಿ ನೀಡುವಂತೆ ಫೆಡರೇಶನ್ ಸೋಮವಾರ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಜನರಲ್ ಡೈರಿ (ಜಿಡಿ) ವಿಭಾಗಕ್ಕೆ ಪತ್ರ ಬರೆಯಲಾಗಿದೆ.

ಜುಲೈ 20ರಂದು ನಡೆದಿರುವ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಂಗಳವಾರ ಪೊಲೀಸರಿಗೆ ಹೊಸ ಶಿಷ್ಟಾಚಾರದ ಅಗತ್ಯವಿದೆ ಎಂದು ಹೇಳಿದೆ. ಕಾಕ್ರೋಚ್ ಜನತಾ ಪಕ್ಷದ ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ಪೊಲೀಸರು ಈ ಹಿಂದೆ ನಿಗದಿಪಡಿಸಿದ ನಿಯಮಗಳನ್ನು ಪಾಲಿಸಲಿಲ್ಲ ಎಂದು ಹೇಳಿರುವ ನ್ಯಾಯಾಲಯ, ಹಲವಾರು ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸಿದೆ.

ʼʼಕೇಂದ್ರ ಸರ್ಕಾರ ಮಾತ್ರವಲ್ಲ ನಿಮ್ಮನ್ನೂ ವಿರೋಧಿಸುತ್ತೇವೆʼʼ: ರಾಹುಲ್ ಗಾಂಧಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸಿಜೆಪಿ

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣವಾಗಿ ಸ್ವತಂತ್ರ ತನಿಖೆ ನಡೆಯಬೇಕು. ಯಾರು ಕಾನೂನನ್ನು ಕೈಗೆತ್ತಿಕೊಂಡರೂ ಅವರನ್ನು ಕಠಿಣ ಕ್ರಮಕ್ಕೆ ಒಳಪಡಿಸಬೇಕು ಎಂದು ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author