ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು(Ahmedabad Plane Crash), 200ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ. ಇನ್ನು ಈ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ(Vijay Rupani) ಇದ್ದರು ಎನ್ನಲಾಗಿದೆ. ಅವರು ಅಹ್ಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣ ಬೆಳೆಸಿದ್ದರು. ಇದೀಗ ಸಂಭವಿಸಿರುವ ದುರಂತದಲ್ಲಿ ಅವರೂ ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಏರ್ ಇಂಡಿಯಾ 171 ವಿಮಾನ ಅಹ್ಮದಾಬಾದ್‌ನಿಂದ ಲಂಡನ್‌ನ ಗಟ್ವಿಕ್‌ಗೆ ಹೊರಡಿತ್ತು. ಟೇಕ್ ಆಫ್ ಆದ ಕೆಲವೇ ಕೆಲವು ಗಂಟೆಗಳಲ್ಲಿ ವಿಮಾನ ಪತನಗೊಂಡು ಬೆಂಕಿಗೆ ಆಹುತಿಯಾಗಿತ್ತು. ಇನ್ನು ವಿಮಾನದಲ್ಲಿ 232 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಮಧ್ಯಾಹ್ನ 1ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
5 ಗಂಟೆವರೆಗೆ ಏರ್‌ಪೋರ್ಟ್ ಶಟ್‌ಡೌನ್
ಸದ್ಯ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶಟ್‌ಡೌನ್ ಮಾಡಲಾಗಿದೆ. ಸುಮಾರು 800 ಅಡಿ ಎತ್ತರದಿಂದ ಪತನಾವಾಗಿದ್ದು, ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.