ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Crime News: ಬೇರೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಳೆಂದು ಪ್ರಿಯತಮೆ ಮೇಲೆ ಗುಂಡು ಹಾರಿಸಿದ ಪ್ರೇಮಿ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಮಂಗಳವಾರ ಮಧ್ಯಾಹ್ನ ಆಘಾತಕಾರಿ ಘಟನೆಯೊಂದು ನಡೆದಿದ್ದು, 28 ವರ್ಷದ ಮಹಿಳೆಯೊಬ್ಬರ ಮೇಲೆ ಆಕೆಯ ಮಾಜಿ ಪ್ರಿಯಕರ ಅರ್ಬಾಜ್ ಎಂಬಾತ ಗುಂಡು ಹಾರಿಸಿದ್ದಾನೆ. ಮಹಿಳೆಯು ಇನ್ನೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಅರ್ಬಾಜ್ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಯತಮೆ ಮೇಲೆ ಗುಂಡು ಹಾರಿಸಿದ ಪ್ರಿಯಕರ

ಸಾಂದರ್ಭಿಕ ಚಿತ್ರ -

Profile Sushmitha Jain Sep 3, 2025 8:46 PM

ಗಾಂಧಿನಗರ: ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ಮಂಗಳವಾರ ಮಧ್ಯಾಹ್ನ ಆಘಾತಕಾರಿ ಘಟನೆಯೊಂದು ನಡೆದಿದ್ದು, 28 ವರ್ಷದಯುವತಿಯ ಮೇಲೆ ಆಕೆಯ ಮಾಜಿ ಪ್ರಿಯಕರ ಅರ್ಬಾಜ್ (Arbaaz) ಎಂಬಾತ ಗುಂಡು ಹಾರಿಸಿದ್ದಾನೆ. ಘಟನೆಯಿಂದ ಯುವತಿ ಗಾಯಗೊಂಡಿದ್ದಾಳೆ. ಯುವತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಅರ್ಬಾಜ್ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಘಟನೆಯ ದಿನ ಯುವತಿ ತನ್ನ ಮಾಜಿ ಪ್ರಿಯಕರ ಅರ್ಬಾಜ್‌ನನ್ನು ಭೇಟಿಯಾಗಲು ತೆರಳಿದ್ದಳು. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಕೋಪಗೊಂಡ ಅರ್ಬಾಜ್ ತನ್ನ ಬಂದೂಕಿನಿಂದ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಆಕೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ. ಘಟನೆಯ ಬಳಿಕ, ಮಧ್ಯ ಪ್ರದೇಶದ ಮೂಲದವನಾದ ಅರ್ಬಾಜ್ ಸ್ಥಳದಿಂದ ಪರಾರಿಯಾಗಿದ್ದ, ಕೊನೆಎ ತನ್ನ ರಾಜ್ಯಕ್ಕೆ ಬಸ್‌ನಲ್ಲಿ ತೆರಳುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ.

ತನಿಖೆಯಿಂದ ತಿಳಿದು ಬಂದಿರುವ ಮಾಹಿತಿಯ ಪ್ರಕಾರ, ಯುವತಿ ಮತ್ತು ಅರ್ಬಾಜ್ ಕೆಲಕಾಲ ಪ್ರೀತಿಸುತ್ತಿದ್ದರು. ಆದರೆ ಆಕೆ ಇನ್ನೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದು ಅರ್ಬಾಜ್‌‌ನ ಕೋಪಕ್ಕೆ ಕಾರಣವಾತ್ತು. ಆತ ಈ ಕಾರಣಕ್ಕಾಗಿ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿ, ಮಧ್ಯಪ್ರ ದೇಶದಿಂದ 28,000 ರೂ.ಗೆ ಖರೀದಿಸಿದ ಬಂದೂಕಿನೊಂದಿಗೆ ಅಹಮದಾಬಾದ್‌ಗೆ ತೆರಳಿದ್ದ. ಯುವತಿಯನ್ನು ಭೇಟಿಯಾಗಿ, ವಾಗ್ವಾದ ನಡೆಸಿದ ನಂತರ ಗುಂಡಿನ ದಾಳಿ ಮಾಡಿದ್ದಾನೆ.

ಈ ಸುದ್ದಿಯನ್ನು ಓದಿ: Viral News: ಆಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಈ ಕುಟುಂಬ ಮಾಡಿದ ಮಾಸ್ಟರ್‌ ಪ್ಲ್ಯಾನ್‌ ಏನ್‌ ಗೊತ್ತಾ?

ಪೊಲೀಸರು ಆರೋಪಿಯನ್ನು ವಿಚಾರಣೆಗೊಳಪಡಿಸಿದ್ದು, ಆತ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಆಕೆಯ ಆರೋಗ್ಯ ಸ್ಥಿತಿಯು ಈಗ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಈ ಪ್ರಕರಣದಲ್ಲಿ ಕೊಲೆ ಯತ್ನದ ಆರೋಪದಡಿ ತನಿಖೆಯನ್ನು ಮುಂದುವರಿಸಿದ್ದಾರೆ. ಸ್ಥಳೀಯ ಸಮುದಾಯದಲ್ಲಿ ಈ ಘಟನೆ ಆತಂಕವನ್ನುಂಟು ಮಾಡಿದೆ.