ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat : ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ನ್ಯೂಯಾರ್ಕ್‌ಗೆ ಹೊರಟಿದ್ದ ಪ್ಲೇನ್‌ ಮುಂಬೈಗೆ ವಾಪಸ್‌

ಬಾಂಬ್‌ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ಮಾರ್ಗ ಮಧ್ಯದಿಂದಲೇ ಮುಂಬೈಗೆ ವಾಪಾಸ್‌ ಆಗಿದೆ. ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ !

ಏರ್‌ ಇಂಡಿಯಾ

Profile Vishakha Bhat Mar 10, 2025 2:54 PM

ಮುಂಬೈ: ಬಾಂಬ್‌ ಬೆದರಿಕೆ (Bomb Threat) ಬಂದ ಹಿನ್ನಲೆಯಲ್ಲಿ ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ (Air India) ವಿಮಾನ ಮಾರ್ಗ ಮಧ್ಯದಿಂದಲೇ ಮುಂಬೈಗೆ ವಾಪಾಸ್‌ ಆಗಿದೆ. ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಬಾಂಬ್ ಇದೆ" ಎಂಬ ಸಂದೇಶವಿರುವ ಪತ್ರವನ್ನು ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಗಮನಿಸಿದ್ದು, ನಂತರ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎಂದು ಸಹಾರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ನಂತರ ವಿಮಾನವು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅವರು ಹೇಳಿದರು. ಇದುವರೆಗೂ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಮತ್ತು ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಮಾನವು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಗಾಗುತ್ತಿದೆ ಮತ್ತು ಏರ್ ಇಂಡಿಯಾ ಅಧಿಕಾರಿಗಳು ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದಾರೆ. ವಿಮಾನವನ್ನು ಮಾರ್ಚ್ 11, 2025 ರ 0500 ಗಂಟೆಗೆ ಕಾರ್ಯಾಚರಣೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರಿಗೆ ಹೋಟೆಲ್ ವಸತಿ, ಊಟ ಮತ್ತು ಇತರ ಸಹಾಯವನ್ನು ನೀಡಲಾಗಿದೆ" ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯು ತನ್ನ ಅತ್ಯುನ್ನತ ಆದ್ಯತೆಯಾಗಿದೆ ಎಂದು ಏರ್ ಇಂಡಿಯಾ ಭರವಸೆ ನೀಡಿದೆ. ಈ ಅಡಚಣೆಯಿಂದ ನಮ್ಮ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆಯನ್ನು ಕಡಿಮೆ ಮಾಡಲು ನಮ್ಮ ಸಹೋದ್ಯೋಗಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Bomb Threat: ಮುಂಬೈ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್; ಅಫ್ಜಲ್‌ ಗ್ಯಾಂಗ್‌ನಿಂದ ಬೆದರಿಕೆ!

2024 ರಿಂದ ಇಲ್ಲಿಯ ವರೆಗೆ ವಿಮಾನ ಸಂಸ್ಥೆಗಳಿಗೆ ಸಾಲು ಸಾಲು ಬೆದರಿಕೆ ಬಂದಿವೆ. ಬೆದರಿಕೆ ಬಂದ ನಂತರ ಹಲವು ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿತ್ತು.