ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Attack: ಪಹಲ್ಗಾಮ್ ದಾಳಿ ಬಳಿಕ 2ನೇ ಬಾರಿ ಪ್ರಧಾನಿಯನ್ನು ಭೇಟಿಯಾದ ಅಜಿತ್ ದೋವಲ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾದ ಅಜಿತ್ ದೋವಲ್ ಕಳೆದ 48 ಗಂಟೆಗಳಲ್ಲಿ ಕೈಗೊಂಡ ರಾಷ್ಟ್ರೀಯ ಭದ್ರತೆ ಕುರಿತು ಪ್ರಧಾನಿ ಅವರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. ಪಹಲ್ಗಾಮ್ ದಾಳಿಯ ಬಳಿಕ ಅವರು ಎರಡನೇ ಬಾರಿ ಪ್ರಧಾನಿಯನ್ನು ಭೇಟಿಯಾಗಿದ್ದು, ಕುತೂಹಲ ಮೂಡಿಸಿದೆ.

ಪ್ರಧಾನಿ ಮೋದಿ, ಎನ್ಎಸ್ಎ  ದೋವಲ್ ಮತ್ತೆ ಭೇಟಿ, ಸುದೀರ್ಘ ಚರ್ಚೆ

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ (Pahalgam Attack) ನಡೆಸಿದ ಬಳಿಕ ಭಾರತ ಸರ್ಕಾರ ಕೈಗೊಂಡ ಕ್ರಮಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (National Security Advisor) ಅಜಿತ್ ದೋವಲ್ (Ajit Doval) ಅವರನ್ನು ಭೇಟಿಯಾದರು. ಭಾರತದ ಮಿಲಿಟರಿ ಪ್ರತಿಕ್ರಿಯೆ ಕುರಿತ ಉದ್ವಿಗ್ನತೆ ಮತ್ತು ಊಹಾಪೋಹಗಳ ನಡುವೆ ಎರಡನೇ ಬಾರಿಗೆ ಅಜಿತ್ ದೋವಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು. 2019ರ ಪುಲ್ವಾಮಾ ದಾಳಿಯ ಅನಂತರ ಇದು ಭಾರತದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ. ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾದ ಅಜಿತ್ ದೋವಲ್ ಕಳೆದ 48 ಗಂಟೆಗಳಲ್ಲಿ ಕೈಗೊಂಡ ರಾಷ್ಟ್ರೀಯ ಭದ್ರತೆ ಕುರಿತು ಮಾಹಿತಿ ನೀಡಿದರು ಎನ್ನಲಾಗಿದೆ. ಪಹಲ್ಗಾಮ್ ದಾಳಿಯ ಬಳಿಕ ಅವರು ಎರಡನೇ ಬಾರಿ ಪ್ರಧಾನಿಯನ್ನು ಭೇಟಿಯಾಗಿದ್ದಾರೆ. 1971ರ ಪಾಕಿಸ್ತಾನದೊಂದಿಗಿನ ಯುದ್ಧದ ಅನಂತರ ಮೊದಲ ಬಾರಿಗೆ ದೇಶದಲ್ಲಿ ಬುಧವಾರ ನಾಗರಿಕ ರಕ್ಷಣೆಗಾಗಿ ರಾಜ್ಯ ಸರ್ಕಾರಗಳು ಅಣಕು ಭದ್ರತಾ ಕವಾಯತುಗಳನ್ನು ನಡೆಸುತ್ತಿದ್ದು, ಇದರ ಒಂದು ದಿನ ಮೊದಲು ದೋವಲ್ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ಹಲವು ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದರು. ಇದು ಲಷ್ಕರ್ ಭಯೋತ್ಪಾದಕ ಗುಂಪಿನ ವಿರುದ್ಧ ಮಿಲಿಟರಿ ಕ್ರಮದ ಚರ್ಚೆಯನ್ನು ಹೆಚ್ಚಿಸಿದೆ ಎನ್ನಲಾಗಿದೆ.

ಪಹಲ್ಗಾಮ್ ದಾಳಿಯ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ದೋವಲ್ ಮತ್ತು ಜನರಲ್ ಚೌಹಾಣ್ ಅವರನ್ನು ಭೇಟಿಯಾಗಿ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದಾಗಿ ಘೋಷಿಸಿದ್ದರು.

ಪಹಲ್ಗಾಮ್ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರೆ ಉಗ್ರಗಾಮಿ ಸಂಘಟನೆಯ ರೆಸಿಸ್ಟೆನ್ಸ್ ಫ್ರಂಟ್ ವಿಭಾಗ ಹೊತ್ತುಕೊಂಡಿದೆ. ಇದರ ಜತೆಗೆ ಪಾಕಿಸ್ತಾನ ಆಗಾಗ್ಗೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವಂತೆ ಕರೆ ನೀಡುತ್ತಿದ್ದು, ಭಾರತದ ಮೇಲೆ ಭಯೋತ್ಪಾದಕ ದಾಳಿಯನ್ನು ಯೋಜಿಸುವಲ್ಲಿ ಮತ್ತೆ ಭಾಗಿಯಾಗಿದೆ ಎಂಬುದಕ್ಕೆ ತನ್ನ ಬಳಿ ಪುರಾವೆಗಳಿವೆ ಎಂದು ಭಾರತದ ಗುಪ್ತಚರ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: Mock Drill: ನಾಳೆ ನಡೆಯಲಿರುವ ಮಾಕ್‌ ಡ್ರಿಲ್‌ ಬಗ್ಗೆ ನಿಮಗೆಷ್ಟು ಗೊತ್ತು? ಈ ಬಗ್ಗೆ ಮೊದಲೇ ತಿಳಿದಿರಲಿ

ಪಹಲ್ಗಾಮ್ ದಾಳಿಯನ್ನು ಸಂಘಟಿಸುವಲ್ಲಿ ತನ್ನ ಪಾತ್ರವಿಲ್ಲ ಎನ್ನುತ್ತಿರುವ ಪಾಕಿಸ್ತಾನ ಸರ್ಕಾರ ಸ್ವತಂತ್ರ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದೆ. ಈ ನಡುವೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಗೌಪ್ಯ ಸಭೆಯಲ್ಲಿ ಇಸ್ಲಾಮಾಬಾದ್ ದಾಳಿಯನ್ನು ಖಂಡಿಸಿ ಭಾರತವನ್ನು ಬೆಂಬಲಿಸಿದ ಜಾಗತಿಕ ಸಮುದಾಯದಿಂದ ಬೆಂಬಲವನ್ನು ಪಡೆಯಲು ಪ್ರಯತ್ನಿಸಿದೆ ಎನ್ನಲಾಗಿದೆ.

ಪಾಕ್‌ಗೆ ಬೆಂಬಲ ನೀಡಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇಷ್ಟವಿರಲಿಲ್ಲ ಎನ್ನಲಾಗಿದ್ದು, ಅದು ಲಷ್ಕರೆ-ಎ-ತೈಬಾದ ಪಾತ್ರದ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದೆ. ಪಹಲ್ಗಾಮ್‌ನಲ್ಲಿ ನಾಗರಿಕರು ಮತ್ತು ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಕೌನ್ಸಿಲ್ ಪಾಕಿಸ್ತಾನವನ್ನು ಪ್ರಶ್ನಿಸಿದೆ ಎನ್ನಲಾಗಿದೆ. ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಕಡೆಯಿಂದ ಸತತ 12 ದಿನಗಳವರೆಗೆ ನಿರಂತರ ಮತ್ತು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಪಡೆಗಳು ಪ್ರತಿಕ್ರಿಯೆ ನೀಡಿವೆ.