ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು; ಮಹತ್ವದ ನಿರ್ಧಾರ ಸಾಧ್ಯತೆ

ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಭಾರತ ತಕ್ಕ ಉತ್ತರ ನೀಡಲು ಸಜ್ಜಾಗಿದೆ. ಈಗಾಗಲೇ ರಾಜತಾಂತ್ರಿಕ ಯುದ್ಧವನ್ನು ಸಾರಿದೆ. ಇದೀಗ ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ.

ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು

Profile Vishakha Bhat Apr 24, 2025 8:13 PM

ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಭಾರತ ತಕ್ಕ ಉತ್ತರ ನೀಡಲು ಸಜ್ಜಾಗಿದೆ. ಈಗಾಗಲೇ ರಾಜತಾಂತ್ರಿಕ ಯುದ್ಧವನ್ನು ಸಾರಿದೆ. ಇದೀಗ ಸಂಸತ್ ಭವನದಲ್ಲಿ ರಕ್ಷಣಾ ಸಚಿವ (Pahalgam Terror Attack) ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಇದೀಗ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ನಡೆದ ಸರ್ವಪಕ್ಷ ಸಭೆಯು, ನಾಯಕರು ಹುತಾತ್ಮರಿಗೆ ಗೌರವ ಸಲ್ಲಿಸಲು ಎರಡು ನಿಮಿಷಗಳ ಮೌನ ಆಚರಿಸುವುದರೊಂದಿಗೆ ಪ್ರಾರಂಭವಾಯಿತು. ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಲು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಭಾಗವಹಿಸಿದ್ದಾರೆ. ಇಂದಿನ ಸಭೆಯಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್‌ ಶಾ ಹಾಗೂ ರಾಜನಾಥ್‌ ಸಿಂಗ್‌ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಮುಂದಿನ ನಿರ್ಣಯಗಳ ಕುರಿತು ಸರ್ವಪಕ್ಷ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ.



ಈ ಸುದ್ದಿಯನ್ನೂ ಓದಿ: Pahalgam terror attack: ಪಹಲ್ಗಾಮ್ ಉಗ್ರರ ದಾಳಿಗೆ ಪಾಕ್‌ ಸೆಲೆಬ್ರಿಟಿಗಳಿಂದ ಖಂಡನೆ

ಇಂದು ಬಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. , ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೂರತೆಯಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ; ಕೋಟ್ಯಂತರ ನಾಗರಿಕರು ದುಃಖಿತರಾಗಿದ್ದಾರೆ. ಇಡೀ ದೇಶವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. 'ಈ ದಾಳಿ ನಿರಾಯುಧ ಪ್ರವಾಸಿಗರ ಮೇಲೆ ಮಾತ್ರ ನಡೆದಿಲ್ಲ, ದೇಶದ ಶತ್ರುಗಳು ಭಾರತದ ನಂಬಿಕೆಯ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ ಎಂದು ಹೇಳಿದ ಮೋದಿ, ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲಾಗದಷ್ಟು ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಉಗ್ರರು ಯಾವುದೇ ಬಿಲದಲ್ಲಿ ಅಡಗಿದ್ದರೂ ಅವರನ್ನು ಹುಡುಕಿ ಹೊಡೆಯಲಾಗುತ್ತದೆ ಎಂದು ಹೇಳಿದ್ದಾರೆ.